Recent Posts

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಾಳೆ ಐದು ತಾಲೂಕುಗಳ ಶಾಲೆ ,ಕಾಲೇಜುಗಳಿಗೆ ರಜೆ ಘೋಷಣೆ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿಯೂ ನಾಳೆ ಅಂದರೆ ಜು.19ರಂದು ಪುತ್ತೂರು, ಬಂಟ್ವಾಳ, ಬೆಳ್ತಂಗಡಿ, ಸುಳ್ಯ, ಕಡಬ ತಾಲೂಕುಗಳ ಶಾಲಾ-ಕಾಲೇಜುಗಳಿಗೆ ಮಾತ್ರ ರಜೆ ಘೋಷಣೆ ಮಾಡಿ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್‌ ಅವರು ಇದೀಗ ಆದೇಶ ಹೊರಡಿಸಿದ್ದಾರೆ. ಅದರಂತೆ ಈ ಐದು ತಾಲೂಕಿನ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆ & ಪಿಯು ಕಾಲೇಜುಗಳಿಗೆ ಶುಕ್ರವಾರ ರಜೆಯನ್ನು ನೀಡಲಾಗಿದೆ. ಆದರೆ, ಮಂಗಳೂರು, ಉಳ್ಳಾಲ, ಮೂಡಬಿದಿರೆ, ಮೂಲ್ಕಿ ತಾಲೂಕಿನ ಶಾಲಾ-ಕಾಲೇಜುಗಳಿಗೆ ಶುಕ್ರವಾರ ರಜೆ ಇರುವುದಿಲ್ಲ.

Read More »

ಉಡುಪಿ ಜಿಲ್ಲೆಯಲ್ಲಿ ನಾಳೆ (ಜುಲೈ 19 ) ಶಾಲೆ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ

ಉಡುಪಿ: ಜಿಲ್ಲೆಯಲ್ಲಿ ಧಾರಾಕಾರ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಜಿಲ್ಲೆಯ ಎಲ್ಲಾ ಅಂಗನವಾಡಿಗಳು ಮತ್ತು ಸರಕಾರಿ, ಅನುದಾನಿತ, ಖಾಸಗಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳು ಹಾಗೂ ಪಿಯು ಕಾಲೇಜುಗಳಿಗೆ ಜುಲೈ 19ರ ಶುಕ್ರವಾರ ರಜೆಯನ್ನು ಜಿಲ್ಲಾಧಿಕಾರಿ ಡಾ. ವಿದ್ಯಾಕುಮಾರಿ ಘೋಷಿಸಿದ್ದಾರೆ. ಉಳಿದಂತೆ ಎಲ್ಲಾ ಪದವಿ, ಸ್ನಾತಕೋತ್ತರ ಪದವಿ, ಡಿಪ್ಲೋಮಾ, ಇಂಜಿನಿಯರಿಂಗ್, ಐಟಿಐಗಳಿಗೆ ರಜೆ ಘೋಷಿಸಿರುವುದಿಲ್ಲ.

Read More »

ಶಿರೂರು ಗುಡ್ಡ ಕುಸಿತ: ನಾಪತ್ತೆಯಾಗಿದ್ದು 10 ಮಂದಿ, 6 ಮೃತದೇಹ ಪತ್ತೆ..! ಜಿಲ್ಲಾಧಿಕಾರಿ ಮಾಹಿತಿ

ಕಾರವಾರ: ಶಿರೂರಿನ  ರಾಷ್ಟ್ರೀಯ ಹೆದ್ದಾರಿ 66ರಲ್ಲಿ ನಡೆದ ಗುಡ್ಡ ಕುಸಿತ ದುರಂತದಲ್ಲಿ 10 ಮಂದಿ ಕಣ್ಣರೆಯಾಗಿದ್ದು, ಇದುವರೆಗೆ 6 ಮಂದಿಯ ಮೃತದೇಹ ಪತ್ತೆಯಾಗಿದೆ ಎಂದು ಜಿಲ್ಲಾಧಿಕಾರಿ ಕೆ.ಲಕ್ಷ್ಮೀಪ್ರಿಯಾ ಹೇಳಿದರು. ಈ ಬಗ್ಗೆ ಮಾಹಿತಿ ನೀಡಿರುವ ಜಿಲ್ಲಾಧಿಕಾರಿ ಶಿರೂರಿನ ಒಂದೇ ಕುಟುಂಬದ ನಾಲ್ಕು ಮತ್ತು ಅದೇ ಕುಟುಂಬದ ಸಂಬಂಧಿ ಜಗನ್ನಾಥ, ಉಳುವರೆ ಗ್ರಾಮದ ಸಣ್ಣಿ ಗೌಡ, ಮೂರು ಟ್ಯಾಂಕರ್ ಹಾಗೂ ಒಂದು ಲಾರಿಯ ಚಾಲಕ ಕಣ್ಮರೆಯಾಗಿರುವುದಾಗಿ ಅವರ ಕುಟುಂಬಗಳು ಮಾಹಿತಿ ನೀಡಿವೆ. ಈ ಪೈಕಿ ಶಿರೂರಿನ ನಾಲ್ವರು, ತಮಿಳುನಾಡಿನ ನಾಮಕ್ಕಲ್’ನ ಚಿಣ್ಣನನ್ ಎಂಬ ಟ್ಯಾಂಕರ್ ಚಾಲಕನ …

Read More »

You cannot copy content of this page.