March 14, 2026
WhatsApp Image 2023-11-27 at 10.35.44 AM

ಪುತ್ತೂರು: ರಾಷ್ಟ್ರೀಯ ಮಟ್ಟದ ಕ್ರೀಡಾಕೂಟದಲ್ಲಿ ಬಹುಮಾನ ಸಿಗದ ವಿಚಾರ ಖಿನ್ನತೆಗೊಳಗಾಗಿ ಪ್ರತಿಷ್ಠಿತ ಕಾಲೇಜಿನ ವಿದ್ಯಾರ್ಥಿನಿಯೊಬ್ಬಳು ಕೀಟನಾಶಕ ಸೇವಿಸಿ ಆತ್ಮಹತ್ಯೆಗೆ ಶರಣಾದ ಘಟನೆ . ಜಿಲ್ಲೆಯ ಪುತ್ತೂರಿನ ಸಂಪ್ಯದಲ್ಲಿ ನಡೆದಿದೆ.
ಮೃತ ವಿಧ್ಯಾರ್ಥಿನಿಯನ್ನು ವಿವೇಕಾನಂದ ಪದವಿಪೂರ್ವ ಕಾಲೇಜಿನ ಪಿಯುಸಿ ಕಲಿಯುತ್ತಿದ್ದ ನಿಶಾ(17) ಎಂದು ಗುರುತಿಸಲಾಗಿದೆ.

ಕಳೆದ ಎರಡು ವಾರಗಳ ಹಿಂದೆ ಬಿಹಾರದಲ್ಲಿ ನಡೆದಿದ್ದ ರಾಷ್ಟ್ರಮಟ್ಟದ ಕ್ರೀಡಾಕೂಟದಲ್ಲಿ ನಿಶಾ ರನ್ನಿಂಗ್ ಸ್ಪರ್ಧೆಯಲ್ಲಿ ಭಾಗವಹಿಸಿದ್ದರು, ಆದರೆ ರನ್ನಿಂಗ್ ರೇಸ್ ನಲ್ಲಿ ಬಹುಮಾನ ಸಿಗದಿದ್ದಕ್ಕೆ ಬೇಸರಗೊಂಡಿದ್ದ ನಿಶಾ, ಬಳಿಕ ಖಿನ್ನತೆಗೊಳಗಾಗಿ ತೋಟಕ್ಕೆ ಸಿಂಪಡಿಸುವ ಕೀಟನಾಶವನ್ನ ಸೇವಿಸಿದ್ದರು. ಈ ವೇಳೆ ತೀವ್ರ ವಾಂತಿ ಬಂದ ಕಾರಣಕ್ಕೆ ಮನೆಯವರು ವಿಚಾರಿಸಿದಾಗ ಕೀಟನಾಶಕ ಸೇವಿಸಿದ ವಿಚಾರ ಬೆಳಕಿಗೆ ಬಂದಿದೆ. ಕೂಡಲೇ ಪುತ್ತೂರಿನ ಆಸ್ಪತ್ರೆಗೆ ನಿಶಾ ಅವರನ್ನು ದಾಖಲಿಸಲಾಗಿತ್ತು, ಆದರೆ ಹೆಚ್ಚಿನ ಚಿಕಿತ್ಸೆಗಾಗಿ ಪುತ್ತೂರಿನಿಂದ ಮಂಗಳೂರಿಗೆ ಕೊಂಡೊಯ್ಯುವಂತೆ ವೈದ್ಯರು ತಿಳಿಸಿದ್ದರು, ಕಳೆದ ಒಂದುವಾರದಿಂದ ಮಂಗಳೂರಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ನಿಶಾ, ಚಿಕಿತ್ಸೆ ಫಲಕಾರಿಯಾಗದೆ ಇಂದು ಮೃತಪಟ್ಟಿದ್ದಾರೆ. ಪುತ್ತೂರು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

About The Author

Leave a Reply

Your email address will not be published. Required fields are marked *

You cannot copy content of this page.