January 15, 2025
WhatsApp Image 2023-12-06 at 5.53.57 PM

ವಿಟ್ಲ: ತೋಟದಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಅಡಿಕೆ ಮರ ಮುರಿದು ಬಿದ್ದು ಮಹಿಳೆಯೋರ್ವರು ಸಾವನ್ನಪ್ಪಿದ ಘಟನೆ ಸಾಲೆತ್ತೂರಿನಲ್ಲಿ ನಡೆದಿದೆ. ಮೃತ ದುರ್ದೈವಿ ಗುಲಾಬಿ(48) ಎಂದು ಗುರುತಿಸಲಾಗಿದೆ. ತೋಟದಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಅಡಿಕೆ ಮರವೊಂದು ಆಕಸ್ಮಿಕವಾಗಿ ಮುರಿದು ಬಿದ್ದು ತಲೆಗೆ ತೀವ್ರ ಪೆಟ್ಟಾಗಿದ್ದು ಈ ಹಿನ್ನಲೆ ಕೂಡಲೇ ಮಹಿಳೆಯನ್ನು ವಿಟ್ಲ ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಗೆ ಸಾಗಿಸುವ ವೇಳೆ ಮೃತಪಟ್ಟಿರುವುದಾಗಿ ತಿಳಿದುಬಂದಿದೆ. ಈ ಬಗ್ಗೆ ಪೊಲೀಸರು ತನಿಖೆ ಮುಂದುವರೆಸಿದ್ದಾರೆ.

About The Author

Leave a Reply

Your email address will not be published. Required fields are marked *

You cannot copy content of this page.