ಉಡುಪಿ : ದ್ವಿಚಕ್ರ ವಾಹನ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹಾಲಿನ ಬೂತ್ ಕ್ರೇಟ್ ಗೆ ಡಿಕ್ಕಿ ಹೊಡೆದ ಪಿಕಪ್

ಉಡುಪಿ :ಪಿಕಪ್‌ ಬೈಕ್ ಸವಾರನಿಗೆ ಢಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿ ರಸ್ತೆ ಪಕ್ಕದ ಹಾಲಿನ ಬೂತ್ ನ ಕ್ರೇಟ್ ಗಳಿಗೆ ಢಿಕ್ಕಿಯಾದ ಘಟನೆ ಉಡುಪಿಯ ಕಡಿಯಾಳಿಯಲ್ಲಿ ನಡೆದಿದೆ.

ಇಂದು ಮುಂಜಾನೆ 4.15 ರ ಸುಮಾರಿಗೆ ಈ ಅವಘಡ ಸಂಭವಿಸಿದೆ. ಘಟನೆಯಲ್ಲಿ ಮಿಲ್ಕ್ ಬೂತ್ ಮತ್ತು ವಸ್ತುಗಳಿಗೆ ಅಪಾರ ಹಾನಿಯಾಗಿದೆ. ರಸ್ತೆಯಲ್ಲಿ ಹಾಲಿನ ಪ್ಯಾಕೇಟ್ ಹರಿದು ಹಾಲು ರಸ್ತೆಯ ತುಂಬೆಲ್ಲಾ ಚೆಲ್ಲಿದೆ. ಈ ದೃಶ್ಯ ಮಿಲ್ಕ್ ಬೂತ್ ಗೆ ಅಳವಡಿಸಲಾದ ಸಿಸಿಟಿ ಕ್ಯಾಮರಾದಲ್ಲಿ ಸೆರೆಯಾಗಿದ್ದು ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ವೈರಲ್ ಆಗಿದೆ.

Check Also

ಜುಲೈ.23ರಂದು 2024-25ನೇ ಸಾಲಿನ ‘ಕೇಂದ್ರ ಬಜೆಟ್’ ಮಂಡನೆ

ನವದೆಹಲಿ: 2024-25ನೇ ಸಾಲಿನ ಕೇಂದ್ರ ಬಜೆಟ್ ( Union Budget ) ಜುಲೈ 23 ರಂದು ಲೋಕಸಭೆಯಲ್ಲಿ ಮಂಡನೆಯಾಗಲಿದೆ. ಸಂಸತ್ತಿನ …

Leave a Reply

Your email address will not be published. Required fields are marked *

You cannot copy content of this page.