March 15, 2026
WhatsApp Image 2023-12-14 at 10.38.24 AM

ಮಂಗಳೂರು : ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಕ್ರಮವಾಗಿ ಚಿನ್ನ ಸಾಗಾಟ ಮಾಡುತ್ತಿದ್ದ ಮೂರು ಪ್ರಯಾಣಿಕರನ್ನು ಮಂಗಳೂರು ಕಸ್ಟಮ್ಸ್ ಅಧಿಕಾರಿಗಳು ವಶಕ್ಕೆ ಪಡೆದಿದ್ದು, ಅವರಿಂದ 969 ಗ್ರಾಂ ಚಿನ್ನವನ್ನು ವಶಪಡಿಸಿಕೊಂಡಿದ್ದಾರೆ.

ದುಬೈನಿಂದ ಮಂಗಳೂರಿಗೆ ಆಗಮಿಸಿದ್ದ ಇಂಡಿಯನ್ ಎಕ್ಸ್ ಪ್ರೆಸ್ ವಿಮಾನದಲ್ಲಿ ಬಂದ ಪ್ರಯಾಣಿಕರ ತಪಾಸಣೆ ವೇಳೆ ಈ ಅಕ್ರಮ ಸಾಗಾಟದ ಪ್ರಕರಣ ಬೆಳಕಿಗೆ ಬಂದಿದೆ. ಮೂವರು ಪ್ರಯಾಣಿಕರು ಶೂ ಮತ್ತು ಚಾಕಲೇಟ್ ಬಾಕ್ಸ್ ಹಾಗೂ ಬೆಡ್ ಶೀಟ್ ಗಳಲ್ಲಿ ಚಿನ್ನವನ್ನು ಅಕ್ರಮವಾಗಿ ಸಾಗಿಸಲು ಯತ್ನಿಸಿದ್ದಾರೆ. ವಶಪಡಿಸಿಕೊಂಡ ಚಿನ್ನದ ಮೌಲ್ಯ 60, 07,800 ಎಂದು ಅಂದಾಜಿಸಲಾಗಿದೆ.

About The Author

Leave a Reply

Your email address will not be published. Required fields are marked *

You cannot copy content of this page.