ಸ್ನೇಹಿತರ ಜತೆ ಪಾರ್ಟಿಗೆ ಹೋಗುವುದಾಗಿ ಮನೆಯಿಂದ ತೆರಳಿದ್ದ ವಿದ್ಯಾರ್ಥಿನಿ ಶವವಾಗಿ ಪತ್ತೆ..!

ಚಿಕ್ಕಮಗಳೂರು: ಸ್ನೇಹಿತರ ಜತೆ ಪಾರ್ಟಿಗೆ ಹೋಗುವುದಾಗಿ ಮನೆಯಿಂದ ತೆರಳಿದ್ದ ಎಂಟನೇ ತರಗತಿ ವಿದ್ಯಾರ್ಥಿನಿ, ಶಾಲೆಯ ಬಸ್ ಚಾಲಕನ ಜೊತೆ ರೈಲಿನಡಿ ಬಿದ್ದು ಸಾವನ್ನಪ್ಪಿದ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ಚಿಕ್ಕಮಗಳೂರು ಜಿಲ್ಲೆಯ ಅಜ್ಜಂಪುರ ತಾಲೂಕಿನ ಬಂಕನಕಟ್ಟೆಯಲ್ಲಿ ನಡೆದಿದೆ.

ಬಸ್ ಚಾಲಕ ಸಂತೋಷ್ (28) ಮತ್ತು ಎಂಟನೇ ತರಗತಿ ವಿದ್ಯಾರ್ಥಿನಿ ಜಾನವಿ (14) ನಿಗೂಢ ಸ್ಥಿತಿಯಲ್ಲಿ ಸಾವು ಕಂಡವರು. ಜಾನವಿ ಅಜ್ಜಂಪುರ ತಾಲೂಕಿನ ಗಿರಿಯಾಪುರ ಗ್ರಾಮದ ಜ್ಞಾನದೀಪ ಖಾಸಗಿ ಶಾಲೆಯಲ್ಲಿ ಎಂಟನೇ ತರಗತಿ ಓದುತ್ತಿದ್ದಳು. ಇದೇ ಶಾಲೆಯಲ್ಲಿ ಕಳೆದ ಮೂರು ವರ್ಷಗಳಿಂದ ಸಂತೋಷ್ ಶಾಲಾ ಬಸ್ ಚಾಲಕನಾಗಿ ಕೆಲಸ ಮಾಡುತ್ತಿದ್ದ. ಈ ನಡುವೆ, ತನ್ನ ಮಗಳನ್ನು ಪ್ರೀತಿಸುವಂತೆ ಸಂತೋಷ್ ಕಿರುಕುಳ ನೀಡುತ್ತಿದ್ದಾನೆ ಎಂದು ಆಕೆಯ ಪೋಷಕರು ಈ ಹಿಂದೆ ಶಾಲಾ ಮುಖ್ಯಸ್ಥರ ಗಮನಕ್ಕೆ ತಂದಿದ್ದರು.

ನಿನ್ನೆ ಸ್ನೇಹಿತರ ಜೊತೆ ಹೊಸ ವರ್ಷದ ಪಾರ್ಟಿಗೆ ಹೋಗುವುದಾಗಿ ಹೇಳಿದ್ದ ಜಾನವಿಯನ್ನು ಸಂತೋಷ್ ತನ್ನ ಜೊತೆ ಕರೆದೊಯ್ದಿದ್ದ ಎನ್ನಲಾಗಿದೆ. ಆದರೆ, ಮಧ್ಯರಾತ್ರಿ ರೈಲಿನಡಿ ಬಿದ್ದು ಇವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗುತ್ತಿದೆ. ಸ್ಥಳಕ್ಕೆ ಆಗಮಿಸಿದ ಪೊಲೀಸರು ಪರಿಶೀಲನೆ ನಡೆಸಿ ಇಬ್ಬರ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ. ಇಬ್ಬರೂ ಆತ್ಮಹತ್ಯೆ ಮಾಡಿಕೊಂಡಿದ್ದಾರೆಯೇ ಅಥವಾ ಆಕೆಯನ್ನು ದೂಡಿಹಾಕಿ ಸಾವಿಗೆ ಶರಣಾಗಿದ್ದಾನೆಯೇ ಎಂಬುದು ತನಿಖೆಯಲ್ಲಿ ತಿಳಿದು ಬರಬೇಕು.‌

Check Also

ಉಳ್ಳಾಲ: ನಾಪತ್ತೆಯಾಗಿದ್ದ ವ್ಯಕ್ತಿ ಬಾವಿಯಲ್ಲಿ ಶವವಾಗಿ ಪತ್ತೆ

ಉಳ್ಳಾಲ: ನಾಪತ್ತೆಯಾಗಿದ್ದ ಅವಿವಾಹಿತ ವ್ಯಕ್ತಿಯ ಮೃತದೇಹ ಪಕ್ಕದ ಪಾಳು ಬಿದ್ದ ಬಾವಿಯಲ್ಲಿ ಇಂದು ಪತ್ತೆಯಾದ ಘಟನೆ ಕೊಲ್ಯ ,ಕುಜುಮಗದ್ದೆಯಲ್ಲಿ ನಡೆದಿದೆ. …

Leave a Reply

Your email address will not be published. Required fields are marked *

You cannot copy content of this page.