March 16, 2026
WhatsApp Image 2024-01-08 at 5.39.49 PM

ಉಡುಪಿ :ಸ್ಕೂಟರ್ ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಸ್ಕೂಟರ್ ಸವಾರ ಸಾವನಪ್ಪಿದ ಘಟನೆ ಪಲಿಮಾರು ಬಳಿ ಭಾನುವಾರ ರಾತ್ರಿ ನಡೆದಿದೆ.

ಮೃತರನ್ನು ಪಲಿಮಾರು ದರ್ಕಾಸ್ತು ನಿವಾಸಿ ಧನ್ ರಾಜ್ ಪಲಿಮಾರು ಎಂದು ಗುರುತಿಸಲಾಗಿದೆ. ಈತ ಪಲಿಮಾರಿನಿಂದ ಸ್ಕೂಟಿಯಲ್ಲಿ ಎರ್ಮಾಳಿನ ಪೂಂದಾಡು ಎಂಬಲ್ಲಿಗೆ ರವಿವಾರ ರಾತ್ರಿ ನಾಟಕ ನೋಡಲು ತೆರಳುತ್ತಿದ್ದಾಗ ಹೆದ್ದಾರಿಯಲ್ಲಿ ಬೆಂಗಳೂರಿಗೆ ಹೋಗುತ್ತಿದ್ದ ಬಸ್ಸೊಂದು ಢಿಕ್ಕಿಯಾಗಿ ಗಂಭೀರವಾಗಿ ಗಾಯಗೊಂಡಿದ್ದರು. ಆದರೆ ಆಸ್ಪತ್ರೆಗೆ ಕೊಂಡೊಯ್ಯುವ ದಾರಿ ಮಧ್ಯೆ ಸಾವನಪ್ಪಿದ್ದಾರೆ. ಈ ವೇಳೆ ಸ್ಕೂಟಿಯಲ್ಲಿದ್ದ ತುಷಾರ್ ಪಲಿಮಾರು ಹಾಗೂ ಕೌಶಿಕ್ ಎರ್ಮಾಳು ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ. ಕಾರ್ಕಳ ರಸ್ತೆಯಿಂದ ಹೆದ್ದಾರಿಗೆ ಪ್ರವೇಶಿಸುವ ಸಂದರ್ಭದಲ್ಲಿ ಈ ಅಪಘಾತವು ಸಂಭವಿಸಿದೆ.

About The Author

Leave a Reply

Your email address will not be published. Required fields are marked *

You cannot copy content of this page.