
ಉಡುಪಿ: ಶಾಲಾ ವಾಹನವೊಂದು ನಿಯಂತ್ರಣ ಕಳೆದುಕೊಂಡು ಅಂಗಡಿಗೆ ಡಿಕ್ಕಿ ಹೊಡೆದ ಘಟನೆ ಸಂತೆಕಟ್ಟೆ ಸಮೀಪದ ಮಲ್ಪೆ ಕ್ರಾಸ್ ಬಳಿ ಸಂಭವಿಸಿದೆ. ಬ್ರಹ್ಮಾವರ ಜಿಎಂ ವಿದ್ಯಾನಿಕೇತನ ಪಬ್ಲಿಕ್ ಸ್ಕೂಲ್ ಗೆ ಸೇರಿದ ವಾಹನ ಇದಾಗಿದ್ದು, ಶಾಲಾ ವಾಹನವು ಸಂಜೆ ಮಕ್ಕಳನ್ನು ಮನೆಗೆ ಬಿಡಲು ಹೋಗುತ್ತಿದ್ದ ವೇಳೆ ನಿಯಂತ್ರಣ ತಪ್ಪಿದ ವಾಹನವು ರಸ್ತೆ ಬದಿಯ ಅಂಗಡಿಗಳಿಗೆ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ.ಘಟನೆಯಲ್ಲಿ ಯಾರಿಗೂ ಗಾಯಗಳಾಗಿಲ್ಲ ಎಂದು ತಿಳಿದುಬಂದಿದೆ.
