March 21, 2026
WhatsApp Image 2024-02-03 at 9.16.36 AM

ಮಣಿಪಾಲ: ಅಕ್ರಮವಾಗಿ ವೇಶ್ಯಾವಾಟಿಕೆ ದಂಧೆ ಸಂಬಂಧಿಸಿ ಮೂವರನ್ನು ಮಣಿಪಾಲ ಠಾಣೆಯ ಪೊಲೀಸರು ವಶಕ್ಕೆ ಪಡೆದ ಘಟನೆ ಫೆ.1 ರಂದು ನಡೆದಿದೆ.

ಓರ್ವ ವ್ಯಕ್ತಿ ಮಹಿಳೆಯರನ್ನು ಪುಸಲಾಯಿಸಿ ಕರೆ ತಂದು ಅಕ್ರಮ ವೇಶ್ಯಾವಾಟಿಕೆಗೆ ಕಳುಹಿಸಿಕೊಡುತ್ತಿರುವ ಬಗ್ಗೆ ಬಂದ ಮಾಹಿತಿಯಂತೆ ಸದ್ರಿ ಸ್ಥಳಕ್ಕೆ ಸಿಬ್ಬಂದಿಯವರೊಂದಿಗೆ ದಾಳಿ ನಡೆಸಿ ಆರೋಪಿ ಪವನ್‌ ಎಂಬವನನ್ನು ವಶಕ್ಕೆ ಪಡೆದಿದ್ದಾರೆ.

ಆರೋಪಿ ಪವನ್‌ ಹೇಳಿಕೆಯಂತೆ ಉಡುಪಿ ತಾಲೂಕು ಬೊಮ್ಮರಬೆಟ್ಟು ಮನೆಗೆ ದಾಳಿ ನಡೆಸಿ ಆರೋಪಿ ಚೇತನ್‌ ಸಿ.ಬಿ. ಮತ್ತು ಆರೋಪಿ ಪಂಜು ಎಂಬವರನ್ನು ವಶಕ್ಕೆ ಪಡೆದು ಕೊಂಡಿದ್ದಾರೆ.

ಈ ಬಗ್ಗೆ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

About The Author

Leave a Reply

Your email address will not be published. Required fields are marked *

You cannot copy content of this page.