ಮುಂಬೈ : ದ್ವೇಷ ಭಾಷಣ ಮಾಡಿದ ಆರೋಪದಲ್ಲಿ ಗುಜರಾತ್ ಭಯೋತ್ಪಾದನೆ ನಿಗ್ರಹ ದಳದ ಅಧಿಕಾರಿಗಳು ಮುಂಬೈನಲ್ಲಿ ಇಸ್ಲಾಮಿಕ್ ಬೋಧಕ ಮುಫ್ತಿ ಸಲ್ಮಾನ್ ಅಝಾರಿ ಎಂಬುವರನ್ನು ಬಂಧಿಸಿದ್ದಾರೆ. ಗುಜರಾತ್‌ನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಹಿಂದೂಗಳನ್ನು ನಾಯಿಗೆ ಹೋಲಿಸಿದ ಬಳಿಕ ವಿವಾದ ಉಂಟಾಗಿದ್ದು, ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಎಟಿಎಸ್ ಅಧಿಕಾರಿಗಳು ಮುಫ್ತಿ ಸಲ್ಮಾನ್ ಅಝಾರಿ ಅವರನ್ನು ಮುಂಬೈನಲ್ಲಿ ಬಂಧಿಸಿದ್ದಾರೆ. ಭಾನುವಾರ ಗುಜರಾತ್ ಎಟಿಎಸ್ ಅಧಿಕಾರಿಗಳು ಮುಫ್ತಿ ಸಲ್ಮಾನ್ ಅಝಾರಿಯನ್ನು ಬಂಧಿಸಿ, ಘಟ್ಕೋಪರ್ ಪೊಲೀಸ್ ಠಾಣೆಯಲ್ಲಿ ವಿಚಾರಣೆ ನಡೆಸುತ್ತಿದ್ದಾರೆ. ಗುಜರಾತ್‌ನಲ್ಲಿ ಕೆಲ ದಿನಗಳ ಹಿಂದೆ ಸಾರ್ವಜನಿಕರನ್ನು ಉದ್ದೇಶಿಸಿ ಮಾತನಾಡಿದ್ದ ಅಝಾರಿ, ದ್ವೇಷಭಾಷಣ ಮಾಡಿದ್ದರು. “ಈಗ ನಾಯಿಗಳ ಕಾಲ ನಡೆಯುತ್ತಿದೆ. ಮುಂದೆ ನಮಗೂ ಒಂದು ಕಾಲ ಬರುತ್ತದೆ” ಎಂಬುದಾಗಿ ಹೇಳಿದ್ದರು ಎಂದು ತಿಳಿದುಬಂದಿದೆ. ಈ ವಿಡಿಯೊ ವೈರಲ್ ಆಗುತ್ತಲೇ ಅವರನ್ನು ಬಂಧಿಸಲಾಗಿದೆ.