March 5, 2026
WhatsApp Image 2024-02-10 at 10.14.35 AM

ಮಂಗಳೂರು: ನಗರದ ಕಾವೂರಿನ ಬೋಂದೆಲ್ ಬಳಿಯ ಮೈದಾನದಲ್ಲಿ ಬೈಕ್ ನಲ್ಲಿ ಮಾದಕದ್ರವ್ಯ ಮಾರಾಟ ಮಾಡುತ್ತಿದ್ದ ಇಬ್ಬರನ್ನು ಬಂಧಿಸಿದ ಪೊಲೀಸರು 19 ಗ್ರಾಂ ತೂಕದ 57,000 ಮೌಲ್ಯದ ಮೆಥಪಟೈನ್ ಮಾದಕದ್ರವ್ಯವನ್ನು ವಶಪಡಿಸಿಕೊಂಡಿದ್ದಾರೆ.

ಮಂಗಳೂರು ನಿವಾಸಿ ಹಿಮನೀಶ್ (26), ಕೋಟೆಕಾರು ತಾರಿಪಡ್ಪು ನಿವಾಸಿ ಪವನ್ ರಾಜ್ ಪಿ(28) ಬಂಧಿತ ಆರೋಪಿಗಳು. ಆರೋಪಿಗಳು ಕಾವೂರಿನ ಬೊಂದೆಲ್ ಬಳಿಯ ಮೈದಾನದ ಬಳಿ ಬೈಕ್ ನಲ್ಲಿ ಪ್ಲಾಸ್ಟಿಕ್ ಕವರ್ ಗಳಲ್ಲಿ ಮೆಥಪಟೈನ್ ಮಾದಕದ್ರವ್ಯವನ್ನು ಮಾರಾಟಕ್ಕೆ ಯತ್ನಿಸುತ್ತಿದ್ದರು. ಈ ಬಗ್ಗೆ ಮಾಹಿತಿ ಪಡೆದ ಪೊಲೀಸರು ಮಾದಕದ್ರವ್ಯವನ್ನು ಸೇರಿದಂತೆ ಮೊಬೈಲ್ ಫೋನ್ ಅನ್ನು ವಶಪಡಿಸಿಕೊಂಡಿದ್ದಾರೆ. ಈ ಬಗ್ಗೆ ಕಾವೂರು ಪೊಲೀಸ್ ಠಾಣೆಯಲ್ಲಿ‌ ಪ್ರಕರಣ ದಾಖಲಾಗಿದೆ.

About The Author

Leave a Reply

Your email address will not be published. Required fields are marked *

You cannot copy content of this page.