ಮಂಗಳೂರು : ಉಗ್ರ ಸಂಘಟನೆಗಳ ಜೊತೆಗೆ ಸಂಬಂಧ ಹಿನ್ನೆಲೆಯಲ್ಲಿ ಪಿಎಫ್ ಐ ಸಂಘಟನೆಯನ್ನು ಕೇಂದ್ರ ಸರ್ಕಾರ ನಿಷೇಧ ಮಾಡಿದ ಬೆನ್ನಲ್ಲೇ ಮಂಗಳೂರಿನಲ್ಲಿ ಕುಕ್ಕರ್ ಬಾಂಬ್ ಸ್ಪೋಟ ನಡೆದಿರುವುದು ಹಲವು ಅನುಮಾನಗಳಿಗೆ ಕಾರಣವಾಗಿದೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪಿಎಫ್ ಐ ಪ್ರಬಲವಾಗಿತ್ತು. ಕೇಂದ್ರ ಸರ್ಕಾರ ಪಿಎಫ್ ಐ ಬ್ಯಾನ್ ಮಾಡಿ ಹಲವು ಮುಖಂಡರನ್ನು ಬಂಧಿಸಿತ್ತು. ಈ ಹಿನ್ನೆಲೆಯಲ್ಲಿ ಪ್ರತೀಕಾರವಾಗಿ ಕರಾವಳಿ ಜಿಲ್ಲೆಯಲ್ಲಿ ಈ ರೀತಿ ದೊಡ್ಡಮಟ್ಟದ ದಾಳಿಗೆ ಉಗ್ರರು ಸಂಚು ರೂಪಿಸಿದ್ದರೇ ಎಂಬ ಸಂಶ ವ್ಯಕ್ತವಾಗಿದೆ.
ಇನ್ನು ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದಲ್ಲಿ ಈಗಾಗಲೇ 15 ಪಿಎಫ್ ಐ ಕಾರ್ಯಕರ್ತರು ಹಾಗೂ ಮುಖಂಡರನ್ನು ಬಂಧಿಸಲಾಗಿದೆ. ಜೊತೆಗೆ ಪಿಎಫ್ ಐ ನಿಷೇಧಿಸಿದ್ದಕ್ಕೆ ಎಸ್ ಡಿಪಿಐ ಭಾರೀ ವಿರೋಧ ವ್ಯಕ್ತಪಡಿಸಿತ್ತು. ಎಲ್ಲಾ ಕಾರಣಗಳಿಂದ ಮಂಗಳೂರಿನಲ್ಲಿ ಕುಕ್ಕರ್ ಬಾಂಬ್ ಸ್ಪೋಟ ನಡೆಸಲು ಉಗ್ರರು ಸಂಚು ನಡೆಸಿದ್ದರು ಎಂದು ಹೇಳಲಾಗುತ್ತಿದೆ.