BREAKING NEWS: ವಾಹನ ಸವಾರರ ಗಮನಕ್ಕೆ: HSRP ನಂಬರ್ ಪ್ಲೇಟ್ ಅಳವಡಿಕೆಗೆ ಅವಧಿ ವಿಸ್ತರಣೆ

ವಾಹನಗಳಿಗೆ ಹೆಚ್.ಎಸ್.ಆರ್.ಪಿ ನಂಬರ್ ಪ್ಲೇಟ್ ಅಳವಡಿಕೆಗೆ ಸಾರಿಗೆ ಇಲಾಖೆ ನೀಡಿದ್ದ ಗಡುವು ಇನ್ನೇನು ಮುಗಿಯಲು ಕೇವಲ ಎರಡು ದಿನ ಮಾತ್ರ ಬಾಕಿ ಇರುವಾಗ ಸರ್ಕಾರ ಗಡುವು ವಿಸ್ತರಣೆ ಮಾಡಿದೆ.

ಏಪ್ರಿಲ್ 2019ಕ್ಕಿಂತ ಮೊದಲು ನೋಂದಣಿ ಮಾಡಿಸಿದ್ದ ಹಳೆಯ ವಾಹನಗಳಿಗೆ ಹೈ ಸೆಕ್ಯುರಿಟಿ ರಿಜಿಸ್ಟ್ರೇಷನ್ ನಂಬರ್ ಪ್ಲೇಟ್ (HSRP) ಅವಳಡಿಕೆ ಕಡ್ಡಾಯ ಮಾಡಿ ಸಾರಿಗೆ ಇಲಾಖೆ ಆದೇಶ ಹೊರಡಿಸಿತ್ತು.

ಫೆಬ್ರವರಿ 17ರೊಳಗೆ ಹೆಚ್.ಎಸ್.ಆರ್.ಪಿ ನಂಬರ್ ಪ್ಲೇಟ್ ಅಳವಡಿಸುವಂತೆ ಡೆಡ್ ಲೈನ್ ನೀಡಿತ್ತು.

ವಾಹನಗಳಿಗೆ ಹೆಚ್.ಎಸ್.ಆರ್.ಪಿ ನಂಬರ್ ಪ್ಲೇಟ್ ವಿಚಾರ ಇದೀಗ ವಿಧಾನಪರಿಷತ್ ನಲ್ಲಿ ಪ್ರಸ್ತಾಪವಾಗಿದ್ದು, ಈ ಬಗ್ಗೆ ಪರಿಷತ್ ಸದಸ್ಯ ಮಾದೇಗೌಡ ಪ್ರಶ್ನಿಸಿದ್ದು, ಅವಧಿ ವಿಸ್ತರಿಸಲು ಮನವಿ ಮಾಡಿದ್ದಾರೆ. ಇದಕ್ಕೆ ಉತ್ತರಿಸಿದ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ, ವಾಹನಗಳಿಗೆ ಹೆಚ್.ಎಸ್.ಆರ್.ಪಿ ನಂಬರ್ ಪ್ಲೇಟ್ ಅಳವಡಿಕೆಗೆ ಇನ್ನೂ 3 ತಿಂಗಳು ಅವಧಿ ವಿಸ್ತರಣೆ ಮಾಡುವುದಾಗಿ ತಿಳಿಸಿದರು.

Check Also

ಬಂಟ್ವಾಳ: ಮಧ್ಯರಾತ್ರಿ ರಿಕ್ಷಾ ನಿಲ್ಲಿಸಿ ನಾಪತ್ತೆ! ದರ್ಶನ ಪಾತ್ರಿ ನದಿಗೆ ಹಾರಿರುವ ಶಂಕೆ|

ಬಂಟ್ವಾಳ : ಕುಕ್ಕಿಪಾಡಿ ಗ್ರಾಮದ ನಿವಾಸಿ ದರ್ಶನ ಪಾತ್ರಿ ಗಿರೀಶ್ ಎಂಬವರು ಕಾಣೆಯಾಗಿದ್ದಾರೆ ಎಂಬ ದೂರು ಪೂಂಜಲ್‌ಕಟ್ಟೆ ಠಾಣೆಯಲ್ಲಿ ಪ್ರಕರಣ …

Leave a Reply

Your email address will not be published. Required fields are marked *

You cannot copy content of this page.