March 21, 2026
WhatsApp Image 2024-02-18 at 2.17.02 PM

ಕುಂದಾಪುರ: ಭೀಕರ ಅಪಘಾತ – ಕೆನರಾ ಬ್ಯಾಂಕ್ ಮ್ಯಾನೇಜರ್ ಸಾವು !

ಕುಂದಾಪುರ: ಬೈಕ್ ಗೆ ಹಿಂದಿನಿಂದ ಲಾರಿ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ,ಬ್ಯಾಂಕ್ ಮ್ಯಾನೇಜರಗ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ಹೊಸಾಡು ಗ್ರಾಮದ ಅರಾಟೆ ಬಳಿ ಸಂಭವಿಸಿದೆ. ಮೃತರು ಮಹಾರಾಷ್ಟ್ರದ ನವಿ ಮುಂಬೈ ನಿವಾಸಿ ರಾಹುಲ್ ಬಾಲಕೃಷ್ಣ ರಂಕಂಬೆ ಎಂದು ಗುರುತಿಸಲಾಗಿದೆ. ಇವರು ಮರವಂತೆಯ ಕೆನರಾ ಬ್ಯಾಂಕ್ ಶಾಖೆಯ ಮ್ಯಾನೇಜರ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ಶನಿವಾರ ರಾತ್ರಿ ಮರವಂತೆಯ ಬ್ಯಾಂಕಿನಲ್ಲಿ ಕೆಲಸ ಮುಗಿಸಿ ತನ್ನ ಬೈಕಿನಲ್ಲಿ ಕುಂದಾಪುರದ ಮನೆ ಕಡೆಗೆ ಬರುತ್ತಿದ್ದರು. ಈ ಸಂದರ್ಭ ಬೈಂದೂರು ಕಡೆಯಿಂದ ಕುಂದಾಪುರ ಕಡೆಗೆ ಸಾಗುತ್ತಿದ್ದ ಲಾರಿ ಹಿಂದಿನಿಂದ ಡಿಕ್ಕಿ ಹೊಡೆದಿದೆ. ಅಪಘಾತದ ತೀವ್ರತೆಗೆ ಸ್ಥಳದಲ್ಲಿ ಗಂಭೀರ ಗಾಯಗೊಂಡ ರಾಹುಲ್ ಅವರನ್ನು ಗಂಗೊಳ್ಳಿಯ 24*7 ಆಪದ್ಬಾಂಧವ ಅಂಬುಲೆನ್ಸ್ ನ ಇಬ್ರಾಹಿಂ ಗಂಗೊಳ್ಳಿ ಮತ್ತು ತಂಡ ತಕ್ಷಣ ಕುಂದಾಪುರದ ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆ ರಾಹುಲ್ ಮೃತಪಟ್ಟಿರುವುದಾಗಿ ವೈದ್ಯರು ದೃಢಪಡಿಸಿದ್ದಾರೆ. ಗಂಗೊಳ್ಳಿ ಠಾಣೆ ಎಸ್‌ಐ ಹರೀಶ್‌ ಮತ್ತು ಸಿಬ್ಬಂದಿ ಘಟನೆ ಸ್ಥಳಕ್ಕೆ ಆಗಮಿಸಿ ಸ್ಥಳ ಮಹಜರು ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

About The Author

Leave a Reply

Your email address will not be published. Required fields are marked *

You cannot copy content of this page.