ಉಡುಪಿ : ನೂತನ ರಾಜ್ಯಸಭಾ ಸದಸ್ಯರಾಗಿ ನಾಸೀರ್ ಹುಸೇನ್ ಗೆದ್ದ ಸಂಭ್ರಮದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ವಿಧಾನ ಸೌಧದಲ್ಲೇ ದೇಶ ವಿರೋಧಿ ‘ಪಾಕಿಸ್ಥಾನ್ ಜಿಂದಾಬಾದ್’ ಘೋಷಣೆ ಕೂಗಿರುವ ಆರೋಪ ಖಂಡಿಸಿ ಇಂದು ಉಡುಪಿ ಜಿಲ್ಲಾ ಬಿಜೆಪಿ ನೇತೃತ್ವದಲ್ಲಿ ಜಿಲ್ಲಾ ಕಾಂಗ್ರೆಸ್ ಕಛೇರಿಗೆ ಮುತ್ತಿಗೆ ಹಾಕುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಉಡುಪಿಯ ಬ್ರಹ್ಮಗಿರಿ ಸರ್ಕಲ್ ಬಳಿಯಿಂದ ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷರಾದ ಕಿಶೋರ್ ಕುಮಾರ್ ಕುಂದಾಪುರ ಹಾಗೂ ಉಡುಪಿ ಶಾಸಕ ಯಶ್ವಾಲ್ ಸುವರ್ಣರವರ ನೇತೃತ್ವದಲ್ಲಿ ಪಾದಯಾತ್ರೆ ಮೂಲಕ ತೆರಳಿ ಜಿಲ್ಲಾ ಕಾಂಗ್ರೆಸ್ ಕಚೇರಿಗೆ ಮುತ್ತಿಗೆ ಹಾಕಲು ಬಿಜೆಪಿ ಯತ್ನಿಸಿದೆ.ಇದನ್ನು ತಡೆಯಲು ಪೊಲೀಸರು ಬ್ರಹ್ಮಗಿರಿ ಸರ್ಕಲ್ ನಲ್ಲಿ ವ್ಯಾಪಕ ಬಂದೋಬಸ್ತ್ ಮಾಡಿದ್ದಾರೆ.ಇನ್ನೊಂದೆಡೆ ಕಾಂಗ್ರೆಸ್ ಕಚೇರಿ ಮುಂಭಾಗ ಕಾಂಗ್ರೆಸ್ ಮುಖಂಡರು ಮತ್ತು ಕಾರ್ಯಕರ್ತರು ಬಿಜೆಪಿಗೆ ಸೆಡ್ಡು ಹೊಡೆಯುವ ರೀತಿಯಲ್ಲಿ ಕಚೇರಿ ಮುಂಭಾಗ ಜಮಾಯಿಸಿದ್ದಾರೆ.