ಪಾಕ್​ ಪರ ಘೋಷಣೆ ಪ್ರಕರಣಕ್ಕೆ ಮೇಜರ್​ ಟ್ವಿಸ್ಟ್​; FSL ವರದಿಯಲ್ಲಿ ಸತ್ಯ ಬಹಿರಂಗ

ಬೆಂಗಳೂರು: ರಾಜ್ಯಸಭೆ ಚುನಾವಣೆ ಸಮಯದಲ್ಲಿ ವಿಧಾನಸೌಧದಲ್ಲಿ ಪಾಕ್​ ಪರ ಘೋಷಣೆ ಕೂಗಿದ ಪ್ರಕರಣಕ್ಕೆ ಸ್ಫೋಟಕ ತಿರುವು ಸಿಕ್ಕಿದ್ದು, ಪಾಕಿಸ್ತಾನ ಪರ ಘೋಷಣೆ ಕೂಗಿರುವುದು FSL ವರದಿಯಲ್ಲಿ ದೃಢಪಟ್ಟಿದೆ.

ದುಷ್ಕರ್ಮಿಗಳು ನಾಸಿರ್ ಸಾಬ್ ಜಿಂದಾಬಾದ್ ಮತ್ತು ಪಾಕಿಸ್ತಾನ್ ಜಿಂದಾಬಾದ್ ಎಂದು ಘೋಷಣೆ ಕೂಗಿದ್ದಾರೆ.

ಪರಿಶೀಲನೆ ವೇಳೆ ಆಡಿಯೋ ಮತ್ತು ವಿಡಿಯೋವನ್ನು ಎಡಿಟ್ ಮಾಡಿ ಸೇರಿಸಲಾಗಿಲ್ಲ. ಪಾಕ್ ಪರ ಘೋಷಣೆ ಕೂಗಿದ್ದು ನಿಜ ಎಂದು ತಿಳಿದು ಬಂದಿದೆ.

ಘಟನೆ ಸಂಬಂಧ ಪೊಲೀಸರು ಕೆಲ ಶಂಕಿತರನ್ನು ವಶಕ್ಕೆ ಪಡೆದು ವಿಚಾರಣೆಗೆ ಒಳಪಡಿಸಿದ್ದರು. ಶಂಕಿತ ವ್ಯಕ್ತಿಗಳ ಧ್ವನಿಯನ್ನು ಪೊಲೀಸರು FSLಗೆ ರವಾನೆ ಮಾಡಿದ್ದರು. FSLನಿಂದ ವಾಯ್ಸ್ ಮ್ಯಾಚ್ ಮಾಡುವ ಪ್ರಕ್ರಿಯೆ ನಡೆಯುತ್ತಿದ್ದು, ಆರೋಪಿಯನ್ನು ಬಂಧಿಸಲು ತಯಾರಿ ನಡೆದಿದೆ.

ವಿಧಾನಸೌಧ ಠಾಣೆ ಪೊಲೀಸರು ಈವರೆಗೆ 7 ಮಂದಿಯ ವಿಚಾರಣೆ ನಡೆಸಿದ್ದಾರೆ. ಮೂವರ ವಾಯ್ಸ್ ಸ್ಯಾಂಪಲ್ FSLಗೆ ರವಾನಿಸಿದ್ದಾರೆ. ವಿಚಾರಣೆಗೆ ಒಳಪಟ್ಟ ಎಲ್ಲರೂ ಪಾಕ್ ಪರ ಘೋಷಣೆ ಕೂಗಿಲ್ಲವೆಂದು ಹೇಳಿಕೆ ನೀಡಿದ್ದಾರೆ. ಪೊಲೀಸರು 26 ಮಂದಿಯ ಪಟ್ಟಿ ಮಾಡಿದ್ದು, ಇನ್ನೂ 19 ಜನರ ವಿಚಾರಣೆ ನಡೆಯುತ್ತಿದೆ.

Check Also

ಬಂಟ್ವಾಳ: ಮದ್ವೆಯಾದ ಎರಡೇ ದಿನಕ್ಕೆ ನವ ವಿವಾಹಿತೆ ಸಾವು, ಪತಿ ಗಂಭೀರ

ಬಂಟ್ವಾಳ: ನವ ದಂಪತಿಗಳಿಬ್ಬರು ಪ್ರಯಾಣಿಸುತ್ತಿದ್ದ ಕಾರು ಭೀಕರ ಅಪಘಾತ ಸಂಭವಿಸಿ ನವವಿವಾಹಿತೆ ಸಾವನ್ನಪ್ಪಿದ್ದು, ಪತಿ ಗಂಭೀರವಾಗಿ ಗಾಯಗೊಂಡ ಘಟನೆ ರಾಷ್ಟ್ರೀಯ …

Leave a Reply

Your email address will not be published. Required fields are marked *

You cannot copy content of this page.