ಉಡುಪಿ: ಪೆರ್ಡೂರು ಶ್ರೀ ಅನಂತಪದ್ಮನಾಭ ದೇವಸ್ಥಾನದ ವಾರ್ಷಿಕ ಜಾತ್ರೆಯು ಮಾರ್ಚ್19ರವರೆಗೆ ನಡೆಯಲಿದ್ದು, ಮಾರ್ಚ್16ರಂದು ರಥೋತ್ಸವ ನಡೆಯಲಿರುವ ಹಿನ್ನೆಲೆಯಲ್ಲಿ ಕಾನೂನು ಸುವ್ಯವಸ್ಥೆಯನ್ನು ಕಾಪಾಡುವ ದೃಷ್ಟಿಯಿಂದ ಹಿರಿಯಡಕ ಪೊಲೀಸ್ ಠಾಣಾ ವ್ಯಾಪ್ತಿಯ ಪೆರ್ಡೂರು ಗ್ರಾಮದಲ್ಲಿ ಮಾರ್ಚ್16ರ ಬೆಳಗ್ಗೆ 6 ಗಂಟೆಯಿಂದ ರಾತ್ರಿ 12 ಗಂಟೆಯವರೆಗೆ ಕರ್ನಾಟಕ ಅಬಕಾರಿ ನಿಯಮಗಳು 1968ರ ನಿಯಮ 3 ರಡಿ ಪೆರ್ಡೂರು ಗ್ರಾಮದ ವ್ಯಾಪ್ತಿಯಲ್ಲಿ ಮದ್ಯ ಮಾರಾಟದ ಸನ್ನದುಗಳನ್ನು ಹೊಂದಿರುವ ಬಾರ್ ಮತ್ತು ರೆಸ್ಟೋರೆಂಟ್ ಮತ್ತು ವೈನ್ ಶಾಪ್‌ಗಳಲ್ಲಿ ಮದ್ಯ ಮಾರಾಟವನ್ನು ನಿಷೇಧಿಸಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.