May 2, 2026
WhatsApp Image 2024-03-22 at 2.45.31 PM

ಮಂಗಳೂರು  : ದಕ್ಷಿಣ ಕನ್ನಡ ಜಿಲ್ಲೆ ಸ್ವೀಪ್ ಸಮಿತಿ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ದಕ್ಷಿಣ ಕನ್ನಡ, ತಾಲೂಕು ಪಂಚಾಯತ್ ಮಂಗಳೂರು ಇದರ ಸಹಯೋಗದಲ್ಲಿ ಕಂದಾವರ ಮತ್ತು ಗುರುಪುರ ಗ್ರಾಮ ಪಂಚಾಯತ್ ಜಂಟಿಯಾಗಿ ದಿನಾಂಕ 22-03-2024ರಂದು ಮತದಾನ ಜಾಗೃತಿ ಜಾಥಾ ಆಯೋಜಿಸಿತು.

ಈ ವೇಳೆ ಕಂದಾವರ ಗ್ರಾಮ ಪಂಚಾಯತ್ ನಿಂದ ಕೈಕಂಬ ಜಂಕ್ಷನ್ ವರೆಗೆ ಜಾಥ ನಡೆದಿದ್ದು, ಜಾಥಾದಲ್ಲಿ ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿಯವರು, ಸಹಾಯಕ ನಿರ್ದೇಶಕರು (ಗ್ರಾ.ಉ), ಎರಡು ಪಂಚಾಯತ್ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು, ಪಂಚಾಯತ್ ಅಭಿವೃದ್ದಿ ಅಧಿಕಾರಿಗಳು, ಕಾರ್ಯದರ್ಶಿಗಳು, ಚುನಾವಣೆ ವಿಭಾಗದ ತಾಲೂಕು ಮಟ್ಟದ ಸಂಪನ್ಮೂಲ ವ್ಯಕ್ತಿ, ಸುಂಕದಕಟ್ಟೆ ಕಾಲೇಜು ವಿದ್ಯಾರ್ಥಿಗಳು, ಒಕ್ಕೂಟದ ಸದಸ್ಯರು,ತಾಲೂಕು ಪಂಚಾಯತ್ ಐಇಸಿ ಸಂಯೋಜಕರು ಹಾಗೂ ಗ್ರಾಮ ಪಂಚಾಯತ್ ಸಿಬ್ಬಂದಿಗಳು ಭಾಗವಹಿಸಿದ್ದರು. ಇದೇ ವೇಳೆ ಮತದಾನ ಜಾಗೃತಿ ಕುರಿತಾದ ಪ್ರಮಾಣ ವಚನವನ್ನು ಸ್ವೀಕರಿಸಲಾಯಿತು.

About The Author

Leave a Reply

Your email address will not be published. Required fields are marked *

You cannot copy content of this page.