ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ತಾಲೂಕು ಪಂಚಾಯತ್ ಮಂಗಳೂರು ಇದರ ಸಹಯೋಗದಲ್ಲಿ ಇಂದು ನಗರದ ಸ್ಟೇಟ್ ಬ್ಯಾಂಕ್ ಬಸ್ ನಿಲ್ದಾಣದ ಬಳಿ ಸೈಂಟ್ ಆಗ್ನೇಸ್ ವಿದ್ಯಾರ್ಥಿಗಳಿಂದ ಬೀದಿನಾಟಕ ಮೂಲಕ ಮತದಾನದ ಜಾಗೃತಿ ಮೂಡಿಸಲಾಯಿತು.
ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಆನಂದ್ ಕೆ ಅವರು ಈ ವೇಳೆ ಮಾತನಾಡಿ, ಮತದಾನದ ಪ್ರಾಮುಖ್ಯತೆ ಬಗ್ಗೆ ಸಾರ್ವಜನಿಕರಿಗೆ ಬೀದಿನಾಟಕ ಮೂಲಕ ಅದ್ಭುತವಾಗಿ ತಿಳಿಹೇಳಿದ ವಿದ್ಯಾರ್ಥಿಗಳ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು. ಅಷ್ಟೇ ಅಲ್ಲ ಎಪ್ರಿಲ್ 26 ರಂದು ಕಡ್ಡಾಯವಾಗಿ ಮತದಾನ ಮಾಡುವಂತೆ ಸಾರ್ವಜನಿಕರಿಗೆ ತಿಳಿಸಿದರು.
ಈ ವೇಳೆ ಮಂಗಳೂರು ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಅಪ್ಪಣ್ಣ ಕೆ.ಸಿ , ಸಹಾಯಕ ನಿರ್ದೇಶಕರು (ಗ್ರಾ.ಉ) ಶ್ರೀ ಮಹೇಶ್ ಅಂಬೆಕಲ್ಲು, ಎನ್‌ಎಸ್‌ಎಸ್ ಅಧಿಕಾರಿ ಡಾ ಉದಯ ಕುಮಾರ್, ಜಿಲ್ಲಾ ಪಂಚಾಯತ್ ಎಸ್ ಬಿ ಎಮ್ ಐಇಸಿ ಸಂಯೋಜಕರಾದ ದೊಂಬಯ್ಯ, ತಾಲೂಕು ಪಂಚಾಯತ್ ಐಇಸಿ ಸಂಯೋಜಕರಾದ ನಿಶ್ಮಿತ ಬಿ ಹಾಗೂ ಜಿ.ಪಂ ಮತ್ತು ತಾ.ಪಂ ಸಿಬ್ಬಂದಿಗಳು ಹಾಜರಿದ್ದರು. ನಂತರ ನಗರದ ಪ್ರಮುಖ ಸ್ಥಳಗಳಾದ ಸಿಟಿ ಸೆಂಟರ್ ಮಾಲ್, ಪ್ರೆಸ್ ಕ್ಲಬ್ , ಬೆಂಗ್ರೆ ಮುಂತಾದೆಡೆ ಬೀದಿನಾಟಕದ ಮೂಲಕ ಸಾರ್ವಜನಿಕರಲ್ಲಿ ಮತದಾನದ ಜಾಗೃತಿ ಮೂಡಿಸಲಾಯಿತು.