March 5, 2026
al future copy

ಅಳದಂಗಡಿ, ಎ. 21: 2022-23ನೇ ಸಾಲಿನ ಕರ್ನಾಟಕ ದ್ವಿತೀಯ ಪಿಯುಸಿ ಫಲಿತಾಂಶ ಇಂದು (ಶುಕ್ರವಾರ, ಏಪ್ರಿಲ್ 21) ಪ್ರಕಟವಾಗಿದ್ದು, ರಾಜ್ಯದ ಶೇ.74.67 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ದಕ್ಷಿಣ ಕನ್ನಡಕ್ಕೆ ಜಿಲ್ಲೆ ಮೊದಲ ಸ್ಥಾನ ಪಡೆದಿದ್ದರೆ, ಉಡುಪಿ ಜಿಲ್ಲೆಗೆ ದ್ವಿತೀಯ ಸ್ಥಾನ ಮತ್ತು ಕೊಡಗು ಜಿಲ್ಲೆಗೆ ತೃತೀಯ ಸ್ಥಾನ ಪಡೆದಿದ್ದಾರೆ. ಅಳದಂಗಡಿ ಸರಕಾರಿ ಪದವಿ ಪೂರ್ವ ಕಾಲೇಜು ಶೇ.   96.2  ಫಲಿತಾಂಶ ದಾಖಲಿಸಿದೆ.


ಕಲಾ ವಿಭಾಗದಲ್ಲಿ 26 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿ 25 ಮಂದಿ ತೇರ್ಗಡೆ ಹೊಂದಿ ಓರ್ವ ವಿದ್ಯಾರ್ಥಿನಿ ಉನ್ನತ ಶ್ರೇಣಿಯಲ್ಲಿ ಉತ್ತೀರ್ಣಳಾಗಿದ್ದಾಳೆ. ವಾಣಿಜ್ಯ ವಿಭಾಗದ 54 ಮಂದಿ ವಿದ್ಯಾರ್ಥಿಗಳಲ್ಲಿ 52 ಮಂದಿ ತೇರ್ಗಡೆ 6 ಮಂದಿ ವಿದ್ಯಾರ್ಥಿಗಳು ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ವಿಜ್ಞಾನ ವಿಭಾಗದಲ್ಲಿ 26 ಮಂದಿ ವಿದ್ಯಾರ್ಥಿಗಳಲ್ಲಿ 25 ಮಂದಿ ವಿದ್ಯಾರ್ಥಿಗಳು ಉತ್ತೀರ್ಣರಾಗಿ 3 ಮಂದಿ ಉನತ ಶ್ರೇಣಿಯಲ್ಲಿ ತೇರ್ಗಡೆ ಹೊಂದಿದ್ದಾರೆ. ಒಟ್ಟು 10 ಮಂದಿ ವಿದ್ಯಾರ್ಥಿಗಳು ಉನ್ನತಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದು, ಪ್ರಥಮ ಶ್ರೇಣಿ-60, ದ್ವಿತೀಯ ಶ್ರೇಣಿ – 21 ಹಾಗೂತೃತೀಯ ಶ್ರೇಣಿ – 11 ಮಂದಿ ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ.

About The Author

Leave a Reply

Your email address will not be published. Required fields are marked *

You cannot copy content of this page.