November 10, 2024
WhatsApp Image 2024-04-08 at 8.54.48 AM

ಮುಲ್ಕಿ : ಬಳಕುಂಜೆ “ಕರಿಯ ದೇಸಿಂಗರಾಯ – ಬೊಳಿಯ ದೇಸಿಂಗರಾಯ” ಜೋಡುಕರೆ ಕಂಬಳ ಸಮಾರಂಭಗೊಂಡಿತು ಸಮಾರೋಪ ಸಮಾರಂಭದಲ್ಲಿ ಕಂಬಳ ಸಮಿತಿಯ ಗೌರವಾಧ್ಯಕ್ಷರಾದ ವಿರಾರ್ ಶಂಕರ್ ಶೆಟ್ಟಿ, ಕಣ್ಣೀರು ವಿಶ್ವನಾಥ ಶೆಟ್ಟಿ, ಅಧ್ಯಕ್ಷೆ ಮಲ್ಲಿಕಾ ಯಶವಂತ ಶೆಟ್ಟಿ, ಕಾರ್ಯಾಧ್ಯಕ್ಷ ಕಿರಣ್ ಕುಮಾರ್ ಶೆಟ್ಟಿ ಕೋಲ್ನಾಡು ಗುತ್ತು, ಉಪಾಧ್ಯಕ್ಷರಾದ ದಿನೇಶ್ ಸುವರ್ಣ ಬೆಳ್ಳಾಯರು, ಕಾರ್ಯದರ್ಶಿ ವೀರೇಂದ್ರ ಪೂಂಜ ಕೋಟ್ನಾಯ ಗುತ್ತು, ರಂಜನ್ ಶೆಟ್ಟಿ, ಕೆಂಪುಗುಡ್ಡೆ, ದಿನಕರ ಶೆಟ್ಟಿ, ಬಳಕುಂಜ, ಶರತ್ ಶೆಟ್ಟಿ ಸಂಕಲಕರಿಯ ಹಾಗೂ ವಿವಿಧ ಸೇವಾ ಸಂಸ್ಥೆಗಳ ಸದಸ್ಯರು ಉಪಸ್ಥಿತರಿದ್ದು ಕೂಟದಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಿದರು.

ಕಂಬಳ ಕೂಟದ ಫಲಿತಾoಶ. ಕೂಟದಲ್ಲಿ ಭಾಗವಹಿಸಿದ ಕೋಣಗಳ ಸಂಖ್ಯೆ :

ಕನೆಹಲಗೆ: 05 ಜೊತೆ ಅಡ್ಡಹಲಗೆ: 05 ಜೊತೆ ಹಗ್ಗ ಹಿರಿಯ: 15 ಜೊತೆ ನೇಗಿಲು ಹಿರಿಯ: 20 ಜೊತೆ ಹಗ್ಗ ಕಿರಿಯ: 17 ಜೊತೆ ನೇಗಿಲು ಕಿರಿಯ: 61 ಜೊತೆ ಒಟ್ಟು ಕೋಣಗಳ ಸಂಖ್ಯೆ: 123 ಜೊತೆ

ಕನೆಹಲಗೆ: ( 6.5 ಕೋಲು ನಿಶಾನೆಗೆ ನೀರು ಹಾಯಿಸಿದ್ದಾರೆ ) ಪ್ರಥಮ: ಕಾಂತಾವರ ಬೇಲಾಡಿ ಬಾವ ಅಶೋಕ್ ಶೆಟ್ಟಿ ಹಲಗೆ ಮುಟ್ಟಿದವರು: ತೆಕ್ಕಟ್ಟೆ ಸುಧೀರ್ ದೇವಾಡಿಗ

ಅಡ್ಡ ಹಲಗೆ: ಪ್ರಥಮ: ನಾರಾವಿ ಯುವರಾಜ್ ಜೈನ್ “ಎ” ಹಲಗೆ ಮುಟ್ಟಿದವರು: ಭಟ್ಕಳ ಹರೀಶ್ ದ್ವಿತೀಯ: ಬೋಳಾರ ತ್ರಿಶಾಲ್ ಕೆ ಪೂಜಾರಿ ಹಲಗೆ ಮುಟ್ಟಿದವರು: ಸಾವ್ಯ ಗಂಗಯ್ಯ ಪೂಜಾರಿ

ಹಗ್ಗ ಹಿರಿಯ: ಪ್ರಥಮ: ನಂದಳಿಕೆ ಶ್ರೀಕಾಂತ್ ಭಟ್ “ಎ” ಓಡಿಸಿದವರು: ಬಂಬ್ರಾಣಬೈಲು ವಂದಿತ್ ಶೆಟ್ಟಿ ದ್ವಿತೀಯ: ಮಿಜಾರು ಪ್ರಸಾದ್ ನಿಲಯ ಪ್ರಖ್ಯಾತ್ ಶಕ್ತಿ ಪ್ರಸಾದ್ ಶೆಟ್ಟಿ “ಬಿ” ಓಡಿಸಿದವರು: ಮಿಜಾರು ಅಶ್ವಥಪುರ ಶ್ರೀನಿವಾಸ ಗೌಡ

ಹಗ್ಗ ಕಿರಿಯ: ಪ್ರಥಮ: ತೊಡಾರು ಪಂಚಶಕ್ತಿ ಬಾರ್ದಿಲ ಶ್ಲೋಕ್ ರಂಜಿತ್ ಪೂಜಾರಿ ಓಡಿಸಿದವರು: ಕಕ್ಕೆಪದವು ಪೆಂರ್ಗಾಲು ಕೃತಿಕ್ ಗೌಡ ದ್ವಿತೀಯ: ಸುರತ್ಕಲ್ ಪಾಂಚಜನ್ಯ ಯೋಗೀಶ್ ಪೂಜಾರಿ “ಎ” ಓಡಿಸಿದವರು: ಬೈಂದೂರು ವಿಶ್ವನಾಥ ದೇವಾಡಿಗ

ನೇಗಿಲು ಹಿರಿಯ: ಪ್ರಥಮ: ಬೆಳ್ಳಿಪ್ಪಾಡಿ ಕೈಪ ಕೇಶವ ಮಾಂಕು ಭಂಡಾರಿ “ಎ” ಓಡಿಸಿದವರು: ಮಿಜಾರು ಅಶ್ವಥಪುರ ಶ್ರೀನಿವಾಸ ಗೌಡ ದ್ವಿತೀಯ: ಕಕ್ಕೆಪದವು ಪೆಂರ್ಗಾಲು ಬಾಬು ತನಿಯಪ್ಪ ಗೌಡ ಓಡಿಸಿದವರು: ಕಕ್ಕೆಪದವು ಪೆಂರ್ಗಾಲು ಕೃತಿಕ್ ಗೌಡ

ನೇಗಿಲು ಕಿರಿಯ: ಪ್ರಥಮ: ನಲ್ಲೂರು ಬಜಗೋಳಿ ಶಿವಪ್ರಸಾದ್ ನಿಲಯ ದಿನೇಶ್ ಭಂಡಾರಿ “ಎ” ಓಡಿಸಿದವರು: ಕಕ್ಕೆಪದವು ಗೌತಮ್ ಗೌಡ ದ್ವಿತೀಯ: ಕರ್ನಿರೆ ಅಶ್ರಫ್ ಓಡಿಸಿದವರು: ಮಂಗಲ್ಪಾಡಿ ರಕ್ಷಿತ್ ಶೆಟ್ಟಿ

About The Author

Leave a Reply

Your email address will not be published. Required fields are marked *

You cannot copy content of this page.