ಉಡುಪಿ: ಹೋಟೆಲೊಂದರಲ್ಲಿ ಕೆಲಸ ನಿರ್ವಹಿಸುತ್ತಿದ್ದ ಕಾರ್ಮಿಕನೊಬ್ಬ, ತಾನಿರುವ ವಿಶ್ರಾಂತಿ ಕೊಠಡಿಯಲ್ಲಿ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಭಾನುವಾರ ರಾತ್ರಿ ಉಡುಪಿಯಲ್ಲಿ ನಡೆದಿದೆ.ಆತ್ಮಹತ್ಯೆ ಮಾಡಿಕೊಂಡಿರುವ ಕಾರ್ಮಿಕನನ್ನು ಹೇರೂರಿನ ಸಂತೋಷ ರಘುರಾಮ ಶೆಟ್ಟಿ ಎಂದು ಗುರುತಿಸಲಾಗಿದೆ.
ಇನ್ನು ಆತ್ಮಹತ್ಯೆಗೆ ಕಾರಣ ತಿಳಿದುಬಂದಿಲ್ಲ. ನಗರ ಪೋಲಿಸ್ ಠಾಣಾಧಿಕಾರಿ ಪುನೀತ್ ಕುಮಾರ್, ತನಿಖಾ ಸಹಾಯಕ ಮರಿ ಗೌಡ ಘಟನಾ ಸ್ಥಳಕ್ಕೆ ಭೇಟಿ ನೀಡಿ ಮಹಜರು ಪ್ರಕ್ರಿಯೆ ನಡೆಸಿದ್ದಾರೆ. ಮೃತದೇಹವನ್ನು ಅಜ್ಜರಕಾಡಿನ ವೈದ್ಯಕೀಯ ಪರೀಕ್ಷಾ ಕೇಂದ್ರಕ್ಕೆ ರವಾನಿಸಲು ಸಮಾಜಸೇವಕ ನಿತ್ಯಾನಂದ ಒಳಕಾಡುವರು ಸಹಕರಿಸಿದರು.