ಮುಲ್ಕಿ: ಮುಲ್ಕಿ ಪೊಲೀಸ್ ಠಾಣಾ ವ್ಯಾಪ್ತಿಯ ಕಾರ್ನಾಡು ಗ್ರಾಮದ ಲಿಂಗಪ್ಪಯ್ಯಕಾಡು, ಯಲ್ಲಮ್ಮ ದೇವಸ್ಥಾನದ ಬಳಿ ಸಾರ್ವಜನಿಕ ಸ್ಥಳದಲ್ಲಿ ಜೂಜಾಟ ಆಡುತ್ತಿದ್ದ ಖಚಿತ ಮಾಹಿತಿ ಪಡೆದ ಪೊಲೀಸರು ದಾಳಿ ನಡೆಸಿ ಆರು ಮಂದಿ ಆರೋಪಿಗಳನ್ನು ಬಂಧಿಸಿ ಪ್ರಕರಣ ದಾಖಲಿಸಿದ್ದಾರೆ.
ಆರೋಪಿಗಳನ್ನು ಸ್ಥಳೀಯ ನಿವಾಸಿಗಳಾದ ಸಂತೋಷ್, ಬಶೀರ್, ಪ್ರದೀಪ್, ಮುಸ್ತಾಫ, ಆದಿವಪ್ಪ ಸೋಮ ಗುಂಡ, ವಿಶ್ವನಾಥ ಎಂದು ಗುರುತಿಸಲಾಗಿದೆ. ಆರೋಪಿಗಳು ಇಸ್ಪೀಟು ಜೂಜಾಟಕ್ಕೆ ಪಣವಾಗಿಟ್ಟ ಒಟ್ಟು 3350 ರೂಪಾಯಿ, ಜೂಜಾಟಕ್ಕೆ ಬಳಸಿದ್ದ ಇಸ್ಪೀಟುಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ.