ಸುಬ್ರಹ್ಮಣ್ಯ: ಸಿಡಿಲು ಬಡಿದು ನವವಿವಾಹಿತ ಯುವಕ ಮೃತ್ಯು

ಸುಬ್ರಹ್ಮಣ್ಯ: ಸಿಡಿಲು ಬಡಿದು ಯುವಕನೋರ್ವ ಮೃತಪಟ್ಟ ಘಟನೆ ಕಡಬ ತಾಲೂಕಿನ ಸುಬ್ರಹ್ಮಣ್ಯದಲ್ಲಿ ಶುಕ್ರವಾರ ಸಂಜೆ ಸಂಭವಿಸಿದೆ.

ಸುಬ್ರಹ್ಮಣ್ಯ ಗ್ರಾಮದ ಪರ್ವತಮುಖಿ ನಿವಾಸಿ ಸೋಮಸುಂದರ್ (34) ಮೃತರು ಎಂದು ಗುರುತಿಸಲಾಗಿದೆ.

ಶುಕ್ರವಾರ ಸಂಜೆ ಸುಬ್ರಹ್ಮಣ್ಯ ಪರಿಸರದಲ್ಲಿ ಮಳೆ ಆರಂಭಕ್ಕೂ ಮೊದಲು ಗಾಳಿ, ಗುಡುಗು ಆರಂಭಗೊಂಡಿದ್ದು ಈ ವೇಳೆ ಮನೆಯಂಗಲದಲ್ಲಿ ಒಣಗಿಸಲು ಹಾಕಲಾಗಿದ್ದ ಅಡಿಕೆಯನ್ನು ಸೋಮಸುಂದರ್ ಅವರು ರಾಶಿ ಮಾಡುವ ವೇಳೆ ಸಿಡಿಲು ಬಡಿದಿದ್ದು, ಕೂಡಲೇ ಅವರನ್ನು ಆಸ್ಪತ್ರೆಗೆ ಕರೆದೊಯ್ದರೂ ಆ ವೇಳೆಗಾಗಲೇ ಅವರು ಮೃತರಾಗಿದ್ದಾರೆ ಎಂದು ತಿಳಿದುಬಂದಿದೆ.

ಸೋಮಸುಂದರ್ ಅವರು ಸುಬ್ರಹ್ಮಣ್ಯ ಸಮೀಪ ಕಾರ್ ವಾಷಿಂಗ್ ಉದ್ಯಮ ನಡೆಸಿಕೊಂಡಿದ್ದು, 10 ದಿನಗಳ ಹಿಂದೆಯಷ್ಟೇ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದರು.

ಮೃತರು ತಾಯಿ, ತಂಗಿ, ಪತ್ನಿಯನ್ನು ಅಗಲಿದ್ದಾರೆ.

Check Also

ಮಣಿಪಾಲ: ಪರೀಕ್ಷೆಯಲ್ಲಿ ಅನುತ್ತೀರ್ಣ – ಎಸ್ಸೆಸ್ಸೆಲ್ಸಿ ವಿದ್ಯಾರ್ಥಿ ಆತ್ಮಹತ್ಯೆ

ಮಣಿಪಾಲ: 10 ನೇ ತರಗತಿಯ ಪರೀಕ್ಷೆಯಲ್ಲಿ ಅನುತ್ತೀರ್ಣಗೊಂಡ ಕಾರಣಕ್ಕೆ ಮನನೊಂದು ವಿದ್ಯಾರ್ಥಿಯೋರ್ವ ಆತ್ಮಹತ್ಯೆ ಮಾಡಿಕೊಂಡ ಘಟನೆ ಮಣಿಪಾಲದಲ್ಲಿ ನಡೆದಿದೆ.ಮೃತ ಬಾಲಕನನ್ನು ಕಾಪು …

Leave a Reply

Your email address will not be published. Required fields are marked *

You cannot copy content of this page.