March 21, 2026
WhatsApp Image 2024-05-06 at 2.23.59 PM

ಉಡುಪಿ: ಟೀ ಕುಡಿಯುವಾಗ ತೀವ್ರ ಅಸ್ವಸ್ಥರಾಗಿ ಕುಸಿದು ಬಿದ್ದ ಬಡಗಬೆಟ್ಟು ನಿವಾಸಿ ಮಂಜುನಾಥ (28) ಮೃತಪಟ್ಟಿದ್ದಾರೆ. ಅವರು ಸಾಸ್ತಾನ ಟೋಲ್‌ಗೇಟ್‌ನಲ್ಲಿ ಟೋಲ್ ಕಲೆಕ್ಟರ್ ಕೆಲಸ ಮಾಡಿಕೊಂಡಿದ್ದು, ಅನಾರೋಗ್ಯ ಸಮಸ್ಯೆಯಿಂದಾಗಿ ಕೆಲಸಕ್ಕೆ ಹೋಗಿರಲಿಲ್ಲ. ಬೀಡಿನಗುಡ್ಡೆಯಲ್ಲಿರುವ ಬಾವನ ಮನೆಯಲ್ಲಿ ಟೀ ಕುಡಿಯುತ್ತಿದ್ದ ಸಂದರ್ಭ ಬಿದ್ದಿದ್ದರು. ಅಜ್ಜರಕಾಡು ಸರಕಾರಿ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದು, ಪರೀಕ್ಷಿಸಿದ ವೈದ್ಯರು, ಮಂಜುನಾಥ ಅವರು ಮೃತಪಟ್ಟಿರುವ ಬಗ್ಗೆ ದೃಢಪಡಿಸಿದ್ದಾರೆ. ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

About The Author

Leave a Reply

Your email address will not be published. Required fields are marked *

You cannot copy content of this page.