March 21, 2026
WhatsApp Image 2024-05-24 at 11.34.31 AM

ಕಾಪು : ಶಿರ್ವ ಪಂಚಾಯತ್ ವ್ಯಾಪ್ತಿಯ ಮಾಣಿಬೆಟ್ಟು ಬಳಿ ಸಿಡಿಲಾಘಾತಕ್ಕೆ ವಿದ್ಯಾರ್ಥಿಯೋರ್ವ ಬಲಿಯಾಗಿದ್ದಾನೆ. ಗುರುವಾರ ರಾತ್ರಿ ಭಾರಿ ಗಾಳಿ ಮಳೆ ಸಂದರ್ಭ ಶಿರ್ವ ಮಾಣೆಬೆಟ್ಟು ನಿವಾಸಿ ರಕ್ಷಿತ್ ಪೂಜಾರಿಗೆ ಸಿಡಿಲು ಬಿಡಿದು ಮೃತಪಟ್ಟಿದ್ದಾನೆ. ಈತ ಶಿರ್ವ ಎಂಎಸ್‌ಆರ್‌ಎಸ್ ಕಾಲೇಜಿನ ಎರಡನೇ ವರ್ಷದ ಬಿಸಿಎ ವಿದ್ಯಾರ್ಥಿ. ಗುರುವಾರ ಸಂಜೆ ಸ್ನಾನ ಮಾಡಲು ಬಚ್ಚಲು ಮನೆಯ ಬಳಿ ನಿಂತಿದ್ದ ವೇಳೆ ಸಿಡಿಲು ಎರಗಿದೆ. ನೆಲದಲ್ಲಿ ಬಿದ್ದಿದ್ದ ರಕ್ಷಿತ್ ನನ್ನು ಮನೆಯವರು ಮಣಿಪಾಲ ಆಸ್ಪತ್ರೆಗೆ ದಾಖಲಿಸಿದರೂ ಪ್ರಯೋಜನವಾಗಿಲ್ಲ. ಚಿಕಿತ್ಸೆ ಫಲಕಾರಿಯಾಗದೆ ರಾತ್ರಿ ಸುಮಾರು 10 ಗಂಟೆಯ ವೇಳೆಗೆ ಮೃತಪಟ್ಟಿರುವುದಾಗಿ ತಿಳಿದುಬಂದಿದೆ.

About The Author

Leave a Reply

Your email address will not be published. Required fields are marked *

You cannot copy content of this page.