ಮದ್ಯಪ್ರಿಯರಿಗೆ ಬಿಗ್‌ ಶಾಕ್‌: ಜೂನ್ 1 ರಿಂದ 6ರ ರವರೆಗೆ ಮದ್ಯ ಮಾರಾಟ ಬಂದ್

ಬೆಂಗಳೂರು: ಜೂನ್ 1 ರಿಂದ 6ರ ರವರೆಗೆ ವೈನ್ ಶಾಪ್‌, ಎಂಆರ್‌ಪಿ ಔಟ್‌ಲೇಟ್‌ಗಳು ಬಂದ್ ಆಗಲಿದೆ. ರಾಜ್ಯದಲ್ಲಿ ನಡೆಯುತ್ತಿರೋ ಪದವೀಧರ ಕ್ಷೇತ್ರದ ಚುನಾವಣೆ ಮತ್ತು ಲೋಕಸಭಾ ಚುನಾವಣೆಯ ಮತ ಎಣಿಕೆ ಇರುವುದರಿಂದ ಬೆಂಗಳೂರು ಜಿಲ್ಲಾಡಳಿತ ಮದ್ಯ ಮಾರಾಟವನ್ನು ಬಂದ್ ಮಾಡುವಂತೆ ಆದೇಶ ನೀಡಿದೆ. ಜೂನ್ 3 ರಂದು ಪದವೀಧರ ಕ್ಷೇತ್ರ ಚುನಾವಣೆಗೆ ಮತದಾನ ನಡೆಯುವುದರಿಂದ ಜೂನ್ 1ರ ಸಂಜೆ 4 ಗಂಟೆಯಿಂದಲೇ ಬಾರ್ ಬಂದ್‌ ಆಗಲಿದ್ದು, ಜೂನ್ 3 ರವರೆಗೆ ಬಂದ್ ಮಾಡಬೇಕಾಗುತ್ತೆ. ಇನ್ನೂ ಜೂನ್‌ 4 ರಂದು ದೇಶದ್ಯಾಂತ ಲೋಕಸಭಾ ಚುನಾವಣೆಯ ಮತ ಎಣಿಕೆ ನಡೆಯಲಿದೆ. ಹಾಗಾಗಿ ಅಂದೂ ಸಹ ಮದ್ಯ ಮಾರಾಟ ಸಂಪೂರ್ಣ ಬಂದ್ ಆಗಲಿದೆ. ಜೂನ್ 6 ರಂದು ಎಂಎಲ್‌ಸಿ ಮತ ಎಣಿಕೆ ಇರುವುದರಿಂದ ಬಾರ್ ಬಂದ್‌ ಮಾಡುವಂತೆ ಬೆಂಗಳೂರು ಜಿಲ್ಲಾಧಿಕಾರಿ ಆದೇಶದಲ್ಲಿ ತಿಳಿಸಿದ್ದಾರೆ

Check Also

ಕಾರವಾರ: ಮಳೆಗೆ ಗುಡ್ಡ ಕುಸಿದು ʻಕಾರವಾರ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ‌ʼ ಬಂದ್ : ವಾಹನ ಸವಾರರ ಪರದಾಟ

ಕಾರವಾರ : ರಾಜ್ಯಾದ್ಯಂತ ಮಳೆಯ ಆರ್ಭಟ ಮುಂದುವರೆದಿದ್ದು, ಭಾರೀ ಮಳೆಯಿಂದಾಗಿ ಗುಡ್ಡ ಕುಸಿದ ಪರಿಣಾಮ ಕಾರವಾರ-ಬೆಂಗಳುರು ರಾಷ್ಟ್ರೀಯ ಹೆದ್ದಾರಿ ಸಂಚಾರ …

Leave a Reply

Your email address will not be published. Required fields are marked *

You cannot copy content of this page.