ಉಡುಪಿ : ರಘುಪತಿ ಭಟ್ ಅವರಿಗೆ ಪಕ್ಷದಿಂದ ಯಾವುದೇ ಅನ್ಯಾಯ ಆಗಿಲ್ಲ. ಸಾಕಷ್ಟು ಬಾರಿ ಅವಕಾಶ ಸಿಕ್ಕಿದೆ. ಇನ್ನೂ ಅನೇಕರಿಗೆ ಅವಕಾಶ ಸಿಗಬೇಕಾಗಿದೆ. ಅವಕಾಶ ಸಿಕ್ಕವರಿಗೆ ಮತ್ತೆ ಅವಕಾಶ ಸಿಗಬೇಕೆಂಬುವುದು ಸರಿಯಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಹೇಳಿದರು.
ಉಡುಪಿಯಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಘುಪತಿ ಭಟ್ ಗೆಲ್ತೇನೆ ಎಂಬ ಭ್ರಮೆನಲ್ಲಿದ್ದಾರೆ. ಆದರೆ, ಬಿಜೆಪಿ ಅಭ್ಯರ್ಥಿ ಡಾ. ಧನಂಜಯ ಸರ್ಜಿ ಅವರಿಗೆ ನೈರುತ್ಯ ಪದವೀಧರ ಕ್ಷೇತ್ರದ ಪದವೀಧರರು ಆಶೀರ್ವಾದ ಮಾಡುತ್ತಿದ್ದಾರೆ. ಮೊದಲ ಬಾರಿ ಸ್ಪರ್ಧಿಸುತ್ತಿದ್ದರೂ ಓರ್ವ ಸಜ್ಜನ ರಾಜಕಾರಣಿ ಎಂದು ಜನ ಮಾತನಾಡುತ್ತಿದ್ದಾರೆ. ದೊಡ್ಡ ಅಂತರದಲ್ಲಿ ಸರ್ಜಿ ಅವರು ಗೆಲುವು ಸಾಧಿಸುತ್ತಾರೆ ಎಂದರು.
ನೈರುತ್ಯ ಶಿಕ್ಷಕರ ಕ್ಷೇತ್ರದಲ್ಲೂ ಬಿಜೆಪಿ ಮುಖಂಡರು, ಕಾರ್ಯಕರ್ತರು ಒಗ್ಗಟ್ಟಾಗಿ ಕೆಲಸ ಮಾಡುತ್ತಿದ್ದಾರೆ. ಮೈತ್ರಿ ಅಭ್ಯರ್ಥಿ ಎಸ್. ಎಲ್. ಭೋಜೇಗೌಡ ಅವರು ಕೂಡ ದೊಡ್ಡ ಅಂತರದಲ್ಲಿ ಗೆಲ್ಲುತ್ತಾರೆ. ಇದರಲ್ಲಿ ಯಾವುದೇ ಅನುಮಾನ ಬೇಡ ಎಂದಿದ್ದಾರೆ.