ಉಡುಪಿ: ರೋಸ್ ಸಮಾರಂಭದಲ್ಲಿ ಯುವತಿ ಕುಸಿದು ಬಿದ್ದು ಸಾವು

ಉಡುಪಿ: ಕ್ರಿಶ್ಚಿಯನ್ನರ ಮನೆಯಲ್ಲಿ ನಡೆಯುವ ರೋಸ್ ಸಮಾರಂಭಕ್ಕೆ ಆಗಮಿಸಿದ್ದ ಯುವತಿಯೊಬ್ವರು ಕುಸಿದು ಬಿದ್ದು ಸಾವನ್ನಪ್ಪಿದ್ದ ಘಟನೆ ನಿನ್ನೆ ರಾತ್ರಿ ಸಂಭವಿಸಿದೆ.

ಮೃತ ಯುವತಿಯನ್ನು ಹಾವಂಜೆ ನಿವಾಸಿ ಜೋಸ್ನಾ ಲೂವಿಸ್ (23) ಎಂದು ಗುರುತಿಸಲಾಗಿದೆ.

ಜೋಸ್ನಾ ಅವರು ಬುಧವಾರ ರಾತ್ರಿ ಕೊಳಲಗಿರಿ ಹಾವಂಜೆಯ ತನ್ನ ಸಂಬಂಧಿಕರ ಮನೆಯ ರೋಸ್ ಕಾರ್ಯಕ್ರಮಕ್ಕೆ ಬಂದಿದ್ದರು. ರಾತ್ರಿ ಸುಮಾರು 8.30 ಸುಮಾರಿಗೆ ಕುಳಿತಲ್ಲೇ ಜೋಸ್ನಾ ಕುಸಿದು ಬಿದ್ದಿದ್ದಾರೆ.ತಕ್ಷಣ ಯುವತಿಯನ್ನು ಮಣಿಪಾಲ ಆಸ್ಪತ್ರೆಗೆ ಸಂಬಂಧಿಕರು ದಾಖಲಿಸಿದ್ದಾರೆ.ಆದರೆ ಚಿಕಿತ್ಸೆ ಫಲಕಾರಿಯಾಗದೆ ಗುರುವಾರ ಬೆಳಿಗ್ಗೆ ಜೋಸ್ನಾ ಸಾವನ್ನಪ್ಪಿದ್ದಾರೆ.

Check Also

ಬಂಟ್ವಾಳ: ಮದ್ವೆಯಾದ ಎರಡೇ ದಿನಕ್ಕೆ ನವ ವಿವಾಹಿತೆ ಸಾವು, ಪತಿ ಗಂಭೀರ

ಬಂಟ್ವಾಳ: ನವ ದಂಪತಿಗಳಿಬ್ಬರು ಪ್ರಯಾಣಿಸುತ್ತಿದ್ದ ಕಾರು ಭೀಕರ ಅಪಘಾತ ಸಂಭವಿಸಿ ನವವಿವಾಹಿತೆ ಸಾವನ್ನಪ್ಪಿದ್ದು, ಪತಿ ಗಂಭೀರವಾಗಿ ಗಾಯಗೊಂಡ ಘಟನೆ ರಾಷ್ಟ್ರೀಯ …

Leave a Reply

Your email address will not be published. Required fields are marked *

You cannot copy content of this page.