March 4, 2026
WhatsApp Image 2024-05-30 at 6.03.22 PM

ಕಾಪು: ದರೋಡೆಗೆ ಸಂಚು ರೂಪಿಸಿ ಅದಕ್ಕಾಗಿ ಹೊಂಚು ಹಾಕಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಕಾರಿನಲ್ಲಿ ಸಂಚರಿಸುತ್ತಿದ್ದ ಆರೋಪಿಗಳನ್ನು ಕಾಪು ಪೊಲೀಸರು ಶನಿವಾರ ರಾತ್ರಿ ಸಿನಿಮೀಯ ರೀತಿಯ ಕಾರ್ಯಾಚರಣೆಯಲ್ಲಿ ಬಂಧಿಸಿದ್ದಾರೆ.

ಅಮಿತ್ ರಾಜ್, ಪ್ರಕಾಶ್ ಸುರತ್ಕಲ್, ವರುಣ್ ನೀರುಮಾರ್ಗ, ಕಾರ್ತಿಕ್ ಶೆಟ್ಟಿ ಸುರತ್ಕಲ್, ಅಭಿಷೇಕ್, ಶ್ರೀಕಾಂತ್ ಶ್ರೀಪತಿ ಫರಂಗಿಪೇಟೆ ಬಂಧಿತ ಆರೇಪಿಗಳು. ಕಾಪು ಸಿಐ ಜಯಶ್ರೀ ಮಾನೆ ಮತ್ತು ಕಾಪು ಎಸ್ ಐ ಅಬ್ದುಲ್ ಖಾದರ್ ಹಾಗೂ ಸಿಬಂದಿ ಯಶಸ್ವೀ ಕಾರ್ಯಾಚರಣೆ ಮೂಲಕ ಆರೋಪಿಗಳನ್ನು ಬಂಧಿಸಿದ್ದು, ಸ್ಕಾರ್ಪಿಯೋ ಕಾರು ಮತ್ತು ಅದರಲ್ಲಿದ್ದ ಡ್ರ್ಯಾಗನ್, ಚೂರಿ, ಕಬ್ಬಿಣದ ಪೈಪ್ ಮತ್ತು ಮರಳು ಮಿಶ್ರಿತ ಮೆಣಸಿನ ಪುಡಿಯನ್ನು ವಶಪಡಿಸಿಕೊಂಡಿದ್ದಾರೆ. ಕಾಪು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ತನಿಖೆ ಮುಂದುವರಿದಿದೆ.

About The Author

Leave a Reply

Your email address will not be published. Required fields are marked *

You cannot copy content of this page.