March 4, 2026
WhatsApp Image 2024-05-12 at 10.19.52 AM
ಬೆಳ್ತಂಗಡಿ: ಅಪ್ರಾಪ್ತ ವಯಸ್ಸಿನಲ್ಲಿ ಬಾಲಕಿ ಮೇಲೆ ಬೇರೆ ಬೇರೆ ಸಮಯದಲ್ಲಿ ಮೂವರು ಯುವಕರು ಬಲತ್ಕಾರ ಮಾಡಿ ಅತ್ಯಾಚಾರ ಎಸಗಿ ಆಕೆ ಆರು ತಿಂಗಳ ಗರ್ಭಿಣಿಯಾಗಲು ಕಾರಣವಾಗಿರುವ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ. ಈ ಬಗ್ಗೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಗ್ಯಾಂಗ್ ರೇಪ್ ಹಾಗೂ ಪೋಕ್ಸೋ ಅಡಿಯಲ್ಲಿ ಶನಿವಾರ ಪ್ರಕರಣ ದಾಖಲಾಗಿದೆ. ಪ್ರಕರಣ ಸಂಬಂಧ ಮೂವರು ಮೂಡಬಿದ್ರೆ ನಿವಾಸಿಗಳಾದ ಮಹಮ್ಮದ್ ಇಕ್ಬಾಲ್(26), ಫಾರೂಕ್(19) ಹಾಗೂ 18 ವರ್ಷದ ಅಪ್ರಾಪ್ತ ಬಾಲಕನನ್ನು ಬಂಧಿಸಲಾಗಿದೆ.ಬೆಳ್ತಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 18.5 ವಯಸ್ಸಿನ ಬಾಲಕಿಗೆ ಮೂವರು ಯುವಕರು ಬೇರೆ ಬೇರೆ ಸಮಯದಲ್ಲಿ ಬಲತ್ಕಾರ ಮಾಡಿ ಅತ್ಯಾಚಾರ ಎಸೆದಿದ್ದಾರೆ. ಇದೀಗ ಬಾಲಕಿ 6 ತಿಂಗಳ ಗರ್ಭಿಣಿಯಾಗಿದ್ದು, ಆಕೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.ಬೆಳ್ತಂಗಡಿ ಪೊಲೀಸ್ ಠಾಣೆಗೆ ಬಾಲಕಿ ಮೇ.31 ರಂದು ನೀಡಿದ ದೂರಿನ ಮೇರೆಗೆ ಮೂವರ ವಿರುದ್ಧ ಗ್ಯಾಂಗ್ ರೇಪ್ ಮತ್ತು ಪೋಕ್ಸೋ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಪ್ರಕರಣ ಸಂಬಂಧ ಇಂದು ಮೂವರನ್ನು ಬಂಧಿಸಲಾಗಿದೆ. ಈ ಪೈಕಿ ಇಬ್ಬರನ್ನು ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಇನ್ನು ಅಪ್ರಾಪ್ತ ಬಾಲಕನನ್ನು ಮಂಗಳೂರು ಬಾಲನ್ಯಾಯಾಲಕ್ಕೆ ಹಾಜರುಪಡಿಸಲಾಗಿದೆ.

About The Author

Leave a Reply

Your email address will not be published. Required fields are marked *

You cannot copy content of this page.