ಉಡುಪಿ: ಕೋಟ ಶ್ರೀನಿವಾಸ ಪೂಜಾರಿಗೆ 4250 ಮತಗಳ ಮುನ್ನಡೆ

ಉಡುಪಿ: ​ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಗಮನ ಸೆಳೆದಿರುವ ಹಾಗೂ ತಣ್ಣಗೆ ಕಾಂಗ್ರೆಸ್‌-ಬಿಜೆಪಿ ನಡುವೆ ತುರುಸಿನ ಸ್ಪರ್ಧೆಗೆ ಸಾಕ್ಷಿಯಾಗಿದ್ದ ಕ್ಷೇತ್ರಗಳಲ್ಲಿ ಉಡುಪಿ ಚಿಕ್ಕಮಗಳೂರು ಕೂಡ ಒಂದು. ಇಲ್ಲಿ ಜನಪ್ರಿಯ ರಾಜಕಾರಣಿಗಳಾದ ಪರಿಷತ್‌ ವಿರೋಧ ಪಕ್ಷದ ನಾಯಕ, ಬಿಜೆಪಿಯ ಕೋಟ ಶ್ರೀನಿವಾಸ ಪೂಜಾರಿ ಹಾಗೂ ಮಾಜಿ ಸಂಸದ ಜಯಪ್ರಕಾಶ್‌ ಹೆಗ್ಡೆ ನಡುವೆ ಪೈಪೋಟಿ ಇದೆ.ಕರಾವಳಿ ಮತ್ತು ಮಲೆನಾಡಿನ ಸಂಗಮ ಕ್ಷೇತ್ರ ಉಡುಪಿ ಚಿಕ್ಕಮಗಳೂರಿನಲ್ಲಿ ಕರಾವಳಿಗರ ನಡುವೆ ಹಣಾಹಣಿ ಪರಿಷತ್‌ ವಿರೋಧ ಪಕ್ಷದ ನಾಯಕ, ಬಿಜೆಪಿಯ ಕೋಟ ಶ್ರೀನಿವಾಸ ಪೂಜಾರಿಗೆ ಮಾಜಿ ಸಂಸದ ಜಯಪ್ರಕಾಶ್‌ ಹೆಗ್ಡೆ ಸವಾಲು ಕಳೆದ ಬಾರಿ ಮೈತ್ರಿಯಡಿ ಜೆಡಿಎಸ್‌ಗೆ ಈ ಕ್ಷೇತ್ರವನ್ನು ಬಿಟ್ಟುಕೊಟ್ಟಿದ್ದ ಕಾಂಗ್ರೆಸ್ ಈ ಬಾರಿ ಇಲ್ಲಿ ಗೆಲ್ಲುವ ಸವಾಲು

ಕರಾವಳಿ ಮತ್ತು ಮಲೆನಾಡಿನ ಸಂಗಮದಂತಿರುವ ಈ ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ ದಲ್ಲಿ ಕರಾವಳಿ ಭಾಗದ ಇಬ್ಬರ ನಡುವೆ ಜಿದ್ದಾಜಿದ್ದಿನ ಸ್ಪರ್ಧೆ ಇದೆ. ವಿಧಾನ ಪರಿಷತ್‌ ವಿರೋಧ ಪಕ್ಷದ ನಾಯಕ ಬಿಜೆಪಿಯ ಕೋಟ ಶ್ರೀನಿವಾಸ ಪೂಜಾರಿ ಅವರಿಗೆ, ಬಿಜೆಪಿಯಿಂದ ಕಾಂಗ್ರೆಸ್‌ಗೆ ತೆರಳಿ ಸ್ಪರ್ಧಿಸಿರುವ ಮಾಜಿ ಸಂಸದ ಜಯಪ್ರಕಾಶ್‌ ಹೆಗ್ಡೆ ಇಲ್ಲಿ ಪೈಪೋಟಿ ಒಡ್ಡಿದ್ದಾರೆ.ಅಂಚೆ ಮತ ಎಣಿಕೆಯಲ್ಲಿ ಕೆ ಜಯಪ್ರಕಾಶ್‌ ಹೆಗ್ಡೆ ವಿರುದ್ಧ ಕೋಟ ಶ್ರೀನಿವಾಸ ಪೂಜಾರಿ  4250 ಮತಗಳಿಂದ ಮುನ್ನಡೆ ಕಾಯ್ದುಕೊಂಡಿದ್ದಾರೆ.ಕಳೆದ ಬಾರಿ ಮೈತ್ರಿಯಡಿ ಜೆಡಿಎಸ್‌ಗೆ ಈ ಕ್ಷೇತ್ರವನ್ನು ಬಿಟ್ಟುಕೊಟ್ಟಿದ್ದ ಕಾಂಗ್ರೆಸ್ ಈ ಬಾರಿ ತನ್ನ ಗತವೈಭವಕ್ಕೆ ಮರಳಲು ಕೆ ಜಯಪ್ರಕಾಶ್‌ ಹೆಗ್ಡೆ ಮೇಲೆ ಭಾರ ಹಾಕಿದೆ. ಚಿಕ್ಕಮಗಳೂರು ಭಾಗದಲ್ಲಿ ಕಾಂಗ್ರೆಸ್ ಶಾಸಕರು ಇರುವುದು, ಗ್ಯಾರಂಟಿಗಳು ಕೈಹಿಡಿಯಬಹುದು ಎಂಬ ನಿರೀಕ್ಷೆಯಲ್ಲಿ ಕೈ ಪಾಳಯ ಇದೆ. ಅತ್ತ ಬಿಜೆಪಿ ಪ್ರಭಾವಿ, ಸಜ್ಜನ ರಾಜಕಾರಣಿ ಎಂದೇ ಹೆಸರಾದ ಕೋಟ ಶ್ರೀನಿವಾಸ ಪೂಜಾರಿಯನ್ನು ಕಣಕ್ಕಿಳಿಸಿ ಕ್ಷೇತ್ರ ಉಳಿಸಿಕೊಳ್ಳುವ ಉಮೇದಿನಲ್ಲಿದೆ.

ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳೆರಡರ ಕೆಲ ತಾಲೂಕುಗಳನ್ನು ಸೇರಿಸಿ 2009ರಲ್ಲಿ ಹೊಸದಾಗಿ ರಚಿಸಲ್ಪಟ್ಟ ಈ ಉಡುಪಿ- ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ ಒಂದು ಕಾಲದಲ್ಲಿ ಕಾಂಗ್ರೆಸ್‌ನ ಆಡುಂಬೊಲವಾಗಿತ್ತು. ಅದೇ ಇತ್ತೀಚಿನ ವರ್ಷಗಳಲ್ಲಿ ಬಿಜೆಪಿಯ ಭದ್ರಕೋಟೆಯಾಗಿ ಪರಿವರ್ತನೆಯಾಗಿದೆ. ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ ರಾಜ್ಯದಲ್ಲಿ ಮೊದಲ ಹಂತದ (ದೇಶದಲ್ಲಿ ಎರಡನೇ ಹಂತ) ಮತದಾನದ ವೇಳೆ, ಅಂದರೆ ಏಪ್ರಿಲ್‌ 26ರಂದು ಮತದಾನ ನಡೆದಿತ್ತು. ಕ್ಷೇತ್ರದಲ್ಲಿ 15,85,162 ಮತದಾರರಿದ್ದು, ಇದರಲ್ಲಿ ಈ ಬಾರಿ 12,22,888 ಜನರು ತಮ್ಮ ಹಕ್ಕು ಚಲಾಯಿಸಿದ್ದರು. ಈ ಮೂಲಕ ಇಲ್ಲಿ ಶೇ. 77.15 ರಷ್ಟು ಮತದಾನ ನಡೆದಿತ್ತು. ದಿಗ್ಗಜರು ಪ್ರತಿನಿಧಿಸಿದ್ದ ಕ್ಷೇತ್ರ

ಒಂದು ಕಾಲದಲ್ಲಿ ಉಡುಪಿ ಎಂದಾಗಿದ್ದ ಈ ಕ್ಷೇತ್ರವನ್ನು ಕಾಂಗ್ರೆಸ್‌ನ ಪ್ರಭಾವಿ ಮುಖಂಡ ಆಸ್ಕರ್ ಫರ್ನಾಂಡೀಸ್, ಮಾಜಿ ಮುಖ್ಯಮಂತ್ರಿ ಸದಾನಂದ ಗೌಡ, ಬ್ಯಾಂಕಿಂಗ್ ಕ್ಷೇತ್ರದ ದಿಗ್ಗಜ ಟಿಎ ಪೈ ಮೊದಲಾದ ನಾಯಕರು ಪ್ರತಿನಿಧಿಸಿದ್ದರು. 2019ರಲ್ಲಿ ಹಾಲಿ ಕೇಂದ್ರ ಕೃಷಿ ಖಾತೆ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಇಲ್ಲಿಂದ ಗೆದ್ದಿದ್ದರು. ಇನ್ನು ಚಿಕ್ಕಮಗಳೂರು ಕ್ಷೇತ್ರವಂತೂ ಮಾಜಿ ಪ್ರಧಾನಿ ಇಂದಿರಾ ಗಾಂಧಿಯವರನ್ನು ಗೆಲ್ಲಿಸಿದ ಖ್ಯಾತಿಯನ್ನೇ ಹೊಂದಿದೆ. ವಿಧಾನಸಭೆಯಲ್ಲಿ ಕಾಂಗ್ರೆಸ್‌ ಬಿಜೆಪಿ ಸಮಬಲ

ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಕುಂದಾಪುರ, ಉಡುಪಿ, ಕಾಪು, ಕಾರ್ಕಳ, ಶೃಂಗೇರಿ, ಮೂಡಿಗೆರೆ (ಎಸ್ ಸಿ ಮೀಸಲು), ಚಿಕ್ಕಮಗಳೂರು ಮತ್ತು ತರೀಕೆರೆ ವಿಧಾನಸಭಾ ಕ್ಷೇತ್ರಗಳಿವೆ, ಉಡುಪಿ ಕ್ಷೇತ್ರದ ನಾಲ್ಕು ಕ್ಷೇತ್ರಗಳಲ್ಲಿ ಬಿಜೆಪಿ ಶಾಸಕರಿದ್ದರೆ, ಚಿಕ್ಕಮಗಳೂರಿನ ಎಲ್ಲಾ ನಾಲ್ಕೂ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಶಾಸಕರಿರುವುದು ವಿಶೇಷ. 2009ರಿಂದ ಈವರೆಗೆ ಇಲ್ಲಿ ನಡೆದಿರುವ 4 ಚುನಾವಣೆಗಳಲ್ಲಿ 3 ಬಾರಿ ಬಿಜೆಪಿ ಮತ್ತು 1 ಬಾರಿ ಕಾಂಗ್ರೆಸ್ ಜಯಭೇರಿ ಬಾರಿಸಿದೆ. 2009ರ ಚುನಾವಣೆಯಲ್ಲಿ ದಕ್ಷಿಣ ಕನ್ನಡದಿಂದ ಇಲ್ಲಿಗೆ ಬಂದಿದ್ದ ಮಾಜಿ ಸಿಎಂ ಬಿಜೆಪಿ ಡಿವಿ ಸದಾನಂದ ಗೌಡ ಅವರು ಕಾಂಗ್ರೆಸ್‌ನ ಜಯಪ್ರಕಾಶ್ ಹೆಗ್ದೆ ಅವರ ವಿರುದ್ಧ ಅಲ್ಪ ಮತಗಳ ಗೆಲುವು ಸಾಧಿಸಿದ್ದರು. ಮುಂದೆ ಸದಾನಂದ ಗೌಡರು ಸಿಎಂ ಆದಾಗ ಸಂಸದ ಸ್ಥಾನಕ್ಕೆ ರಾಜೀನಾಮೆ ನೀಡಿದರು. ಈ ವೇಳೆ ನಡೆದ ಉಪಚುನಾವಣೆಯಲ್ಲಿ ಕೆ ಜಯಪ್ರಕಾಶ್ ಹೆಗ್ಡೆ ಅವರು ಬಿಜೆಪಿಯ ವಿ ಸುನಿಲ್ ಕುಮಾರ್ ಅವರ ವಿರುದ್ಧ 45,724 ಮತಗಳ ಅಂತರದಿಂದ ಗೆಲುವು ದಾಖಲಿಸಿದ್ದರು. 2014ರಲ್ಲಿ ಮೊದಲ ಬಾರಿ ಕಣಕ್ಕಿಳಿದ ಶೋಭಾ ಕರಂದ್ಲಾಜೆ ಇದೇ ಜಯಪ್ರಕಾಶ್ ಹೆಗ್ಡೆ ಅವರ ವಿರುದ್ಧ 1,81,643 ಮತಗಳ ಭಾರೀ ಅಂತರದಿಂದ ಗೆಲುವು ಸಾಧಿಸಿದರು. ಮುಂದೆ ಜಯಪ್ರಕಾಶ್ ಹೆಗ್ಡೆ ಬಿಜೆಪಿಗೂ ಹೋದರು.2019ರಲ್ಲಿ ಇಲ್ಲಿ ಶೋಭಾ ಕರಂದ್ಲಾಜೆ ಮತ್ತೊಮ್ಮೆ ಗೆಲುವು ಸಾಧಿಸಿದರು. ಈ ಚುನಾವಣೆಯಲ್ಲಿ ಕಾಂಗ್ರೆಸ್‌-ದಳ ಮೈತ್ರಿ ಅಭ್ಯರ್ಥಿಯಾಗಿ ಜೆಡಿಎಸ್‌ನಿಂದ ಪ್ರಮೋದ್ ಮಧ್ವರಾಜ್ ಅವರನ್ನು ಕಣಕ್ಕಿಳಿಸಲಾಗಿತ್ತು. ಆದರೆ ಅವರು 3,49,599 ಮತಗಳ ಭಾರೀ ಅಂತರದಿಂದ ಸೋಲು ಕಂಡರು.

Check Also

ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣ: ಬೆಳ್ಳಾರೆ ಕೇಂದ್ರ ಮಸ್ಜಿದ್ ನಲ್ಲಿ ಭಯೋತ್ಪಾದನಾ ಚಟುವಟಿಕೆ- ಹಲವಾರು ಅನುಮಾನಗಳಿಗೆ ಕಾರಣವಾದ ಈ ಒಂದು ಪೊಸ್ಟ್..

ಬೆಳ್ಳಾರೆಯ ಝಕರಿಯಾ ಜುಮಾ ಮಸೀದಿ ಮತ್ತು SKSSF ವಿಖಾಯ ಕಾರ್ಯಕರ್ತರಾದ ಅಝರ್ ಮತ್ತು ಜಮಾಲ್ ರವರ ಮೇಲೆ ಸಲಫಿ ನಾಯಕ …

Leave a Reply

Your email address will not be published. Required fields are marked *

You cannot copy content of this page.