March 10, 2026
WhatsApp Image 2024-05-29 at 9.36.13 AM

ಉಡುಪಿ : ಉಚ್ಚಾಟನೆಗೊಂಡರೂ ಮಾಜಿ ಶಾಸಕ ರಘುಪತಿ ಭಟ್ ಗೆ ಬಿಜೆಪಿ ಪಕ್ಷದ ಮೇಲಿನ ಪ್ರೀತಿ ಕಡಿಮೆಯಾಗಿಲ್ಲ‌. ವಿಧಾನ ಪರಿಷತ್ ಚುನಾವಣೆಯಲ್ಲಿ ಬಂಡಾಯ ಎದ್ದಿರುವ ಭಟ್ ಅವರನ್ನು ಇತ್ತೀಚೆಗಷ್ಟೆ ಬಿಜೆಪಿಯಿಂದ ಉಚ್ಚಾಟನೆ ಮಾಡಲಾಗಿತ್ತು. ಇದೀಗ ಕರಾವಳಿಯಲ್ಲಿ ಮತ್ತೊಮ್ಮೆ ಬಿಜೆಪಿ ಜಯಭೇರಿ ಬಾರಿಸುತ್ತಿದ್ದಂತೆ ಮಾಜಿ ಶಾಸಕ ಕೆ.ರಘುಪತಿ ಭಟ್, ಸಾಮಾಜಿಕ ಜಾಲ ತಾಣದ ಮೂಲಕ ಬಿಜೆಪಿ ವಿಜಯೀ ಅಭ್ಯರ್ಥಿಗಳಿಗೆ ಅಭಿನಂದನೆ ಸಲ್ಲಿಸುವ ಮೂಲಕ ಗಮನ ಸೆಳೆದಿದ್ದಾರೆ. ಉಡುಪಿ- ಚಿಕ್ಕಮಗಳೂರು ಕ್ಷೇತ್ರದ ಕೋಟ ಶ್ರೀನಿವಾಸ ಪೂಜಾರಿ, ದ.ಕ. ಕ್ಷೇತ್ರದ ಕ್ಯಾ. ಬ್ರಜೇಶ್ ಚೌಟ, ಶಿವಮೊಗ್ಗ ಕ್ಷೇತ್ರದ ಬಿ.ವೈ. ರಾಘವೇಂದ್ರ ಹಾಗೂ ಉತ್ತರ ಕನ್ನಡ ಕ್ಷೇತ್ರದ ವಿಶ್ವೇಶ್ವರ ಹೆಗಡೆ ಕಾಗೇರಿ, ಹಾವೇರಿ ಕ್ಷೇತ್ರದ ಬೊಮ್ಮಾಯಿ, ಬೆಳಗಾವಿ ಕ್ಷೇತ್ರದ ಜಗದೀಶ್ ಶೆಟ್ಟರ್ ಅವರಿಗೆ ಲೋಕಸಭಾ ಚುನಾವಣೆಯಲ್ಲಿ ಗೆಲುವು ಸಾಧಿಸಿರುವುದಕ್ಕೆ ಅಭಿನಂದನೆ ಸಲ್ಲಿಸಿದ್ದಾರೆ. ಇದೇ ವೇಳೆ ರಘುಪತಿ ಭಟ್ ಅವರ ಪತ್ನಿ ಕೋಟ ಶ್ರೀನಿವಾಸ ಪೂಜಾರಿ ಅವರ ವಿಜಯದ ಬಳಿಕ ನಡೆದ ಸಂಭ್ರಮಾಚರಣೆಯಲ್ಲಿ ಮಹಿಳಾ ಕಾರ್ಯಕರ್ತೆಯರ ಜೊತೆ ಕಾಣಿಸಿಕೊಂಡು ಗಮನ ಸೆಳೆದಿದ್ದಾರೆ.

About The Author

Leave a Reply

Your email address will not be published. Required fields are marked *

You cannot copy content of this page.