March 11, 2026
WhatsApp Image 2024-06-09 at 6.04.27 PM

ಬಂಟ್ವಾಳ: ಲಾರಿಯೊಂದು ಹಿಂಬದಿಯಿಂದ ಸ್ಕೂಟರ್ ಗೆ ಡಿಕ್ಕಿ ಹೊಡೆದ ಪರಿಣಾಮ ಸ್ಕೂಟರ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಸಜೀಪ ಮುನ್ನೂರು ಗ್ರಾಮದ ಕಂದೂರು ಎಂಬಲ್ಲಿ ನಡೆದಿದೆ. ಅಮ್ಟಾಡಿ ಗ್ರಾಮದ ಕಲಾಯಿ ನಿವಾಸಿ ರಾಮನಾಯ್ಕ ( 47) ಮೃತಪಟ್ಟವರು. ರಾಮನಾಯ್ಕ ಅವರು ಸ್ಕೂಟರ್ ನಲ್ಲಿ ಬಿ.ಸಿ.ರೋಡಿನಿಂದ ಮುಡಿಪು ಕಡೆಗೆ ಸ್ಕೂಟರ್ ನಲ್ಲಿ ಹೋಗುತ್ತಿದ್ದರು. ಕಂದೂರಿಗೆ ಬರುತ್ತಿದ್ದಂತೆ ಅತೀ ವೇಗ ಮತ್ತು ಅಜಾಗರೂಕತೆಯಿಂದ ಬಂದ ಲಾರಿಯೊಂದು ಹಿಂಬದಿಯಿಂದ ಡಿಕ್ಕಿ ಹೊಡೆದಿದೆ. ಡಿಕ್ಕಿ ಹೊಡೆದ ರಭಸಕ್ಕೆ ರಾಮ ನಾಯ್ಕರು ರಸ್ತೆಗೆ ಎಸೆಯಲ್ಪಟ್ಟಿದ್ದಾರೆ. ಪರಿಣಾಮ ಅವರ ತಲೆಗೆ ಗಂಭೀರವಾಗಿ ಗಾಯಗೊಂಡು ತೀವ್ರ ರಕ್ತಸ್ರಾವವಾಗಿ ಮೃತಪಟ್ಟಿದ್ದಾರೆ. ಸುಮಾರು ಅರ್ಧಗಂಟೆಯವರೆಗೂ ಮೃತದೇಹ ರಸ್ತೆಯಲ್ಲಿಯೇ ಇತ್ತು. ಪೊಲೀಸರು ಸ್ಥಳಕ್ಕೆ ಆಗಮಿಸಿ ಮೃತದೇಹವನ್ನು ಸರಕಾರಿ ಆಸ್ಪತ್ರೆಗೆ ರವಾನಿಸಿದ್ದರು. ಮಹಜರು ಬಳಿಕ ಮೃತದೇಹವನ್ನು ಮನೆಯವರಿಗೆ ಒಪ್ಪಿಸಲಾಗಿದೆ. ಘಟನಾ ಸ್ಥಳಕ್ಕೆ ಮೆಲ್ಕಾರ್ ಟ್ರಾಫಿಕ್ ಎಸ್.ಐ ಸುತೇಶ್ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

About The Author

Leave a Reply

Your email address will not be published. Required fields are marked *

You cannot copy content of this page.