ಉಡುಪಿ : ಉಡುಪಿಯ ಅಂಬಾಗಿಲು ಎಂಬಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ನಾಲ್ವರು ಗಾಯಗೊಂಡಿದ್ದಾರೆ. ಸಂತೆಕಟ್ಟೆಯಿಂದ ಉಡುಪಿ ಕಡೆಗೆ ಸಂಚರಿಸುತಿದ್ದ ಕಾರು ಅತೀ ವೇಗದಲ್ಲಿ ಸಂಚರಿಸುವಾಗ ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಗೆ ಡಿಕ್ಕಿ ಹೊಡೆದಿದೆ. ಅಪಘಾತದ ರಭಸಕ್ಕೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದ್ದು, ರಸ್ತೆಯೆಲ್ಲ ಕಾರಿನ ಬಿಡಿಭಾಗಗಳು ಹರಡಿಕೊಂಡು ಅಪಘಾತದ ಭೀಕರತೆಗೆ ಸಾಕ್ಷಿಯಾಗಿವೆ. ಇನ್ನು, ಕಾರಿನ ಇಂಜಿನ್ ಬೇರ್ಪಟ್ಟು ಮಾರುದ್ದ ಹೋಗಿ ಬಿದ್ದಿದೆ.