ಯೋಗದಿಂದ ರೋಗಮುಕ್ತರಾಗಿ ಆರೋಗ್ಯವನ್ನು ಕಾಪಾಡಿಕೊಳ್ಳಿ~ ಪ್ರಕಾಶ್ಚಂದ್ರ ಶೆಟ್ಟಿ

ಜಿ.ಎಂ. ಗ್ಲೋಬಲ್ ಸ್ಕೂಲ್, ಬ್ರಹ್ಮಾವರ ಇಲ್ಲಿ ಹತ್ತನೆಯ ವಿಶ್ವ ಯೋಗ ದಿನಾಚರಣೆಯನ್ನು ದಿನಾಂಕ 21.06.2024ರಂದು ಬೆಳಿಗ್ಗೆ 6.45ಕ್ಕೆ ಸರಿಯಾಗಿ ಜ್ಯೋತಿ ಬೆಳಗಿಸುವುದರೊಂದಿಗೆ ಕ್ರಮಬದ್ಧವಾಗಿ ಆರಂಭಿಸಲಾಯಿತು. ಪ್ರಾಂಶುಪಾಲ ಪ್ರಣವ್ ಶೆಟ್ಟಿಯವರು ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿ “ಯೋಗ, ಭಾರತದ ಪ್ರಾಚೀನ ಮತ್ತು ಸನಾತನ ವಿದ್ಯೆ.

ವೇದಕಾಲಕ್ಕಿಂತಲೂ ಹಿಂದೆ ಯೋಗಾಸನಗಳು ರೂಢಿಯಲ್ಲಿದ್ದವು. ಇಂದು ಭಾರತವು ಯೋಗಾಸನ ಕ್ಷೇತ್ರದಲ್ಲಿ ವಿಶ್ವಕ್ಕೆ ಗುರುಸ್ಥಾನದಲ್ಲಿದೆ ಹಾಗೂ ಯೋಗಕ್ಕೆ ವಿಶ್ವಮಾನ್ಯತೆ ಇದೆ. ಶಿಸ್ತಿನ ಜೀವನವನ್ನು ನಡೆಸುವುದೇ ಒಂದು ಯೋಗ” ಎಂದು ಯೋಗದ ಕುರಿತು ಸ್ಫೂರ್ತಿದಾಯಕ ಮಾತುಗಳನ್ನಾಡಿದರು.

ಇಂದಿನ ಮುಖ್ಯ ಅತಿಥಿಯಾಗಿ ಯೋಗ ತರಬೇತುದಾರರಾದ ಮಮತಾ ಗಣೇಶ್ ಅವರು ಅಷ್ಟಾಂಗ ಯೋಗ ಪರಿಪಾಲನೆ ನಿಮ್ಮಲ್ಲಿ ಬೆಳೆಸಿಕೊಳ್ಳಿ ಎಂಬ ಧೈಯ ವಾಕ್ಯದೊಂದಿಗೆ ಯೋಗಾಭ್ಯಾಸದ ಆಸನಗಳನ್ನು ಮನೋಜ್ಞವಾಗಿ ಪ್ರಾತ್ಯಕ್ಷಿಕೆಯನ್ನು ನೀಡಿದರು. ಇವರು ಎಕ್ಸಲೆಂಟ್ ಸಿಬಿಎಸ್‌ಇ ಶಾಲೆ ಮೂಡುಬಿದ್ರೆಯಲ್ಲಿ ಸಹಶಿಕ್ಷಕಿಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.

ಜಿ.ಎಂ. ಗ್ಲೋಬಲ್ ಶಾಲಾ ಸಂಸ್ಥಾಪಕರು ಹಾಗೂ ಅಧ್ಯಕ್ಷ ಪ್ರಕಾಶ್ಚಂದ್ರ ಶೆಟ್ಟಿಯವರು ಮಾತನಾಡಿ ವಿಶ್ವ ಆರೋಗ್ಯಕ್ಕಾಗಿ ಯೋಗ, ಸದೃಢ ಮನಸ್ಸಿಗಾಗಿ ನಿರಂತರವಾಗಿ ಯೋಗಾಭ್ಯಾಸವನ್ನು ಮಾಡಿ ಎಂದು ತಿಳಿಸಿದರು. ಯೋಗದಿಂದ ರೋಗಮುಕ್ತರಾಗಿ ಆರೋಗ್ಯವನ್ನು ಕಾಪಾಡಿಕೊಳ್ಳಿ ಎಂದು ಶಿಕ್ಷಕರು ಹಾಗೂ ವಿದ್ಯಾರ್ಥಿಗಳಿಗೆ ಕರೆನೀಡಿದರು.

ಶಾಲಾ ವಿದ್ಯಾರ್ಥಿಗಳ ಯೋಗಭ್ಯಾಸವನ್ನು ನೋಡಿ ಮೆಚ್ಚುಗೆಯನ್ನು ವ್ಯಕ್ತಪಡಿಸಿದರು. ವಿದ್ಯಾರ್ಥಿನಿ ಮಾನ್ಯತಾ ಯೋಗದ ಮಹತ್ವದ ಕುರಿತು ತನ್ನ ಅನಿಸಿಕೆಗಳನ್ನು ವ್ಯಕ್ತಪಡಿಸಿದರು. ವಿದ್ಯಾರ್ಥಿ ಕೌಶಿಕ್ ಕಾರ್ಯಕ್ರಮವನ್ನು ನಿರೂಪಿಸಿದರು. ವಿದ್ಯಾರ್ಥಿ ಸ್ಮಯನ್ ಶೆಟ್ಟಿ ಸ್ವಾಗತ ಭಾಷಣ ನಡೆಸಿಕೊಟ್ಟರು.
ಶಿವಾನಿ ಪಾಟೀಲ್ ಧನ್ಯವಾದ ಸಮರ್ಪಿಸಿದರು.

Check Also

ಉಡುಪಿ: ಗೋಕಳ್ಳತನ ನಡೆಸಿದ್ದ ಇಬ್ಬರು ಆರೋಪಿಗಳ ಬಂಧನ..!

ಕುಂದಾಪುರ: ಜೂನ್ 25ರಂದು ರಾತ್ರಿ ಶಂಕರನಾರಾಯಣ ಪೇಟೆಯಲ್ಲಿ ನಡೆದ ಗೋ ಕಳ್ಳತನಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಶಂಕರನಾರಾಯಣ ಪೋಲಿಸರು ಬಂಧಿಸಿದ್ದಾರೆ. …

Leave a Reply

Your email address will not be published. Required fields are marked *

You cannot copy content of this page.