March 21, 2026
WhatsApp Image 2024-06-25 at 4.39.28 PM

ಕುಂದಾಪುರ : ಕಳೆದ ಬುಧವಾರ ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಬೀಜಾಡಿ ಸಮುದ್ರ ತೀರದಲ್ಲಿ ಮುಳುಗಿ ನಾಪತ್ತೆಯಾಗಿದ್ದ ತುಮಕೂರು ಮೂಲದ ಯುವಕನ ಶವ ಇಂದು ಬೆಳಿಗ್ಗೆ ಉತ್ತರ ಕನ್ನಡ ಜಿಲ್ಲೆಯ ಕಾರವಾರ ಸಮುದ್ರ ತೀರದಲ್ಲಿ ಪತ್ತೆಯಾಗಿದೆ. ಮೃತ ಯುವಕನನ್ನು ತುಮಕೂರು ಜಿಲ್ಲೆ ತಿಪಟೂರಿನ ಟಿ.ಆರ್‌. ಯೋಗೀಶ್‌ (23) ಎನ್ನಲಾಗಿದೆ. ಕಳೆದ ಬುಧವಾರ ಜೂನ್ 19 ರ ಸಂಜೆ 6.45ರ ಸುಮಾರಿಗೆ ಸಮುದ್ರಪಾಲಾಗಿದ್ದ. ಕೋಟೇಶ್ವರ ಸಮೀಪದ ದಾರಸ್‌ ಮನೆ ಸಮೀಪದ ಬೀಚ್‌ಗೆ ಯೋಗೀಶ್‌ ಹಾಗೂ ಸಂದೀಪ್‌ ವಿಹಾರಕ್ಕೆಂದು ಬಂದಿದ್ದರು. ಈ ವೇಳೆ ಯೋಗೀಶ್‌ ನೀರಿಗಿಳಿದಿದ್ದಾರೆ. ಅಲೆಯಬ್ಬರಕ್ಕೆ ಯೋಗೀಶ್‌ ಕೊಚ್ಚಿಕೊಂಡು ಹೋಗಿದ್ದ. ಜತೆಗಿದ್ದ ಸಂದೀಪ್‌ನನ್ನು ಸ್ಥಳೀಯರು ಸಂದೀಪ್‌ನನ್ನು ರಕ್ಷಿಸಿದ್ದರು. ಸುದ್ದಿ ತಿಳಿಯುತ್ತಿದ್ದಂತೆ ಘಟನಾ ಸ್ಥಳಕ್ಕೆ ಕುಂದಾಪುರ ವೃತ್ತ ನಿರೀಕ್ಷಕ ನಂದಕುಮಾರ್‌, ನಗರ ಠಾಣಾ ಎಸ್‌ಐ ಪ್ರಸಾದ್‌ ಕುಮಾರ್‌ ಹಾಗೂ ಪೊಲೀಸ್‌ ಸಿಬ್ಬಂದಿ ಹಾಗೂ ಕರಾವಳಿ ಕಾವಲು ಪಡೆಯ ಸಿಬ್ಬಂದಿ ಕಾರ್ಯಾಚರಣೆ ನಡೆಸಿದ್ದರು. ಆದರೆ, ಯೋಗೀಶ್ ಮೃತದೇಹ ಮಾತ್ರ ಸಿಕ್ಕಿರಲಿಲ್ಲ. ಘಟನೆ ನಡೆದು ಏಳನೇ ದಿನಕ್ಕೆ ಯೋಗೀಶ್ ಮೃತ ದೇಹ ಉತ್ತರ ಕನ್ನಡ ಜಿಲ್ಲೆಯ ಕಾರವಾರ ಸಮುದ್ರ ತೀರದಲ್ಲಿ ಪತ್ತೆಯಾಗಿದೆ.

About The Author

Leave a Reply

Your email address will not be published. Required fields are marked *

You cannot copy content of this page.