March 20, 2026
WhatsApp Image 2024-06-28 at 5.21.21 PM

ಬೆಂಗಳೂರು : ಪೋಕ್ಸೋ ಪ್ರಕರಣದಲ್ಲಿ ಮಾಜಿ ಸಿಎಂ ಯಡಿಯೂರಪ್ಪಗೆ ಮತ್ತೆ ಬಿಗ್ ರಿಲೀಫ್ ಸಿಕ್ಕಿದ್ದು, ಮಧ್ಯಂತರ ಜಾಮೀನು ವಿಸ್ತರಣೆ ಮಾಡಿ ಹೈಕೋರ್ಟ್ ಆದೇಶ ಹೊರಡಿಸಿದೆ.

ಪೋಕ್ಸೋ ಪ್ರಕರಣ ಸಂಬಂಧ ಪ್ರಕರಣ ರದ್ದು ಕೋರಿ ಬಿ.ಎಸ್ ಯಡಿಯೂರಪ್ಪ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಕೋರ್ಟ್ 2 ವಾರಗಳ ಕಾಲ ವಿಚಾರಣೆಯನ್ನು ಮುಂದೂಡಿದೆ.

ಹಾಗೂ ಪೋಕ್ಸೋ ಪ್ರಕರಣದಲ್ಲಿ ಆಕ್ಷೇಪಣೆ ಸಲ್ಲಿಸುವಂತೆ ಎಸ್ ಪಿಪಿಗೆ ಕೋರ್ಟ್ ಸೂಚನೆ ನೀಡಿದೆ. ಕಳೆದ ವಾರ ಬಿ.ಎಸ್ ಯಡಿಯೂರಪ್ಪಗೆ ಬಿಗ್ ರಿಲೀಫ್ ನೀಡಿದ್ದ ಹೈಕೋರ್ಟ್ ಯಡಿಯೂರಪ್ಪರನ್ನು ಬಂಧಿಸದಂತೆ ಸೂಚನೆ ನೀಡಿತ್ತು.

ಬಿ.ಎಸ್ ಯಡಿಯೂರಪ್ಪ ವಿರುದ್ಧ ಪೋಕ್ಸೋ ಪ್ರಕರಣಕ್ಕೆ ಸಂಬಂಧಿಸಿದಂತೆ ಕೋರ್ಟ್ ಗೆ ಪೊಲೀಸರು ನಿನ್ನೆ ಚಾರ್ಜ್ ಶೀಟ್ ಸಲ್ಲಿಕೆ ಮಾಡಿದ್ದಾರೆ. ಮಾಜಿ ಸಿಎಂ ಯಡಿಯೂರಪ್ಪ ನನ್ನ 17 ವರ್ಷದ ಮಗಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಆರೋಪಿಸಿ ಮಹಿಳೆಯೊಬ್ಬರು ದೂರು ನೀಡಿದ್ದರು. ಅಪ್ರಾಪ್ತೆಗೆ ಲೈಂಗಿಕ ದೌರ್ಜನ್ಯ ನೀಡಿದ ಆರೋಪದಡಿ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ವಿರುದ್ಧ ಬೆಂಗಳೂರಿನ ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿತ್ತು. ನಂತರ ಈ ಪ್ರಕರಣವನ್ನು ಸರ್ಕಾರ ಸಿಐಡಿಗೆ ವಹಿಸಿತ್ತು.

About The Author

Leave a Reply

Your email address will not be published. Required fields are marked *

You cannot copy content of this page.