

ಬಂಟ್ವಾಳ : ಕುಕ್ಕಿಪಾಡಿ ಗ್ರಾಮದ ನಿವಾಸಿ ದರ್ಶನ ಪಾತ್ರಿ ಗಿರೀಶ್ ಎಂಬವರು ಕಾಣೆಯಾಗಿದ್ದಾರೆ ಎಂಬ ದೂರು ಪೂಂಜಲ್‌ಕಟ್ಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬುಧವಾರ ತಡರಾತ್ರಿ 2 ಗಂಟೆ ಸುಮಾರಿಗೆ ಬಾಡಿಗೆ ಹೋಗಲು ಇದೆ ಎಂದು ಹೇಳಿ ಮನೆಯಿಂದ ತೆರಳಿದ್ದು, ನದಿಗೆ ಹಾರಿರುವ ಶಂಕೆ ವ್ಯಕ್ತವಾಗಿದೆ.
ಪೊಳಲಿ ಸೇತುವೆ ಮೇಲೆ ರಿಕ್ಷಾ ಒಂದು ಅಡ್ಡವಾಗಿ ನಿಂತಿದ್ದನ್ನು ಗಮನಿಸಿ ಪರಿಶೀಲನೆ ನಡೆಸಿದಾಗ ರಿಕ್ಷಾದಲ್ಲಿ ಯಾರೂ ಇಲ್ಲದೇ ಇರುವುದರಿಂದ ರಿಕ್ಷಾವನ್ನು ಪರಿಶೀಲಿಸಿದ ಪೊಲೀಸರು ಗಿರೀಶನ ಮನೆಗೆ ಮಾಹಿತಿ ತಿಳಿಸಿದ್ದಾರೆ.
ಅಡ್ಡೂರು-ಪೊಳಲಿ ಸೇತುವೆಯಿಂದ ನದಿಗೆ ಹಾರಿರುವ ಶಂಕೆ ವ್ಯಕ್ತವಾಗಿದೆ. ವಾಮದಪದವು ಸಮೀಪದ ಕುಕ್ಕಿಪಾಡಿ ಬಾಬು ಪೂಜರಿಯವರ ಪುತ್ರ ಗಿರೀಶ್ (35) ಏಣ್ಮೂರು ಶ್ರೀ ನಾಗಬೃಹ್ಮ ದೈವಸ್ಥಾನದ ಬೈದರ್ಕಳ ಗರಡಿಯಲ್ಲಿ ಕೋಟಿಯ ದರ್ಶನ ಪಾತ್ರಿಯಾಗಿ ಸೇವೆ ಸಲ್ಲಿಸುತ್ತಿದ್ದರು, ಜೊತೆಗೆ ರಿಕ್ಷಾವನ್ನು ಚಲಾಯಿಸುತ್ತಿದ್ದರು.
ಇವರಿಗೆ ಪತ್ನಿ ಹಾಗೂ ಇಬ್ಬರು ಪುಟ್ಟ ಮಕ್ಕಳಿದ್ದಾರೆ. ಸ್ಥಳಕ್ಕೆ ಪೊಲೀಸರು ಮತ್ತು ಅಗ್ನಿಶಾಮಾಕದಳದವರು ನದಿಯಲ್ಲಿ ಹುಡುಕಾಟ ನಡೆಸುತ್ತಿದ್ದಾರೆ.