ಮಂಗಳೂರು: ಧಗಧಗನೆ ಹೊತ್ತಿ ಉರಿದ ಪಾರ್ಕಿಂಗ್ ಮಾಡಿದ್ದ ಕಾರು

ಮಂಗಳೂರು : ಪಾರ್ಕಿಂಗ್ ಮಾಡಿದ್ದ ಕಾರೊಂದು ಬೆಂಕಿಗಾಹುತಿಯಾಧ ಘಟನೆ ಮಂಗಳೂರು ಜ್ಯೋತಿ ಜ್ಯೂಸ್‌ ಜಂಕ್ಷನ್‌ ಮುಂಭಾಗದಲ್ಲಿ ನಡೆದಿದೆ.

ಪಾರ್ಕಿಂಗ್ ಮಾಡಿದ್ದ ಫೋರ್ಡ್‌ ಕಂಪೆನಿಯ ಕಾರಿನಲ್ಲಿ ಇದ್ದಕ್ಕಿದ್ದ ಹಾಗೆ ಬೆಂಕಿ ಕಾಣಿಸಿಕೊಂಡಿದ್ದು, ಕಾರು ಬಹುತೇಕ ಸುಟ್ಟು ಹೋಗಿದೆ. ಕಾರಿನ ಕುರಿತು ಹೆಚ್ಚಿನ ಮಾಹಿತಿ ತಿಳಿದು ಬರಬೇಕಾಗಿದೆ. ಬೆಂಕಿ ಹಿಡಿದ ಕೂಡಲೇ ಸ್ಥಳೀಯರು ಬೆಂಕಿ ನಂದಿಸಲು ನೀರು ಹಾಕಿ ಪ್ರಯತ್ನಿಸಿದ್ದಾರೆ. ಸ್ಥಳದಲ್ಲಿ ದಟ್ಟವಾದ ಹೊಗೆ ಕೂಡಾ ಆವರಿಸಿದ್ದು, ಆತಂಕದ ವಾತಾವರಣ ಉಂಟಾಗಿತ್ತು. ಟ್ರಾಫಿಕ್‌ ಪೊಲೀಸರು ಘಟನಾ ಸ್ಥಳಕ್ಕೆ ತೆರಳಿ ಮುಂದಿನ ಕ್ರಮ ಕೈಗೊಂಡಿದ್ದಾರೆ. ಈ ಸಂದರ್ಭ ರಸ್ತೆ ಸಂಚಾರ ಕೊಂಚ ಹೊತ್ತು ಅಸ್ತವ್ಯಸ್ಥಗೊಂಡಿತು.

Check Also

ಬಂಟ್ವಾಳ: ಮದ್ವೆಯಾದ ಎರಡೇ ದಿನಕ್ಕೆ ನವ ವಿವಾಹಿತೆ ಸಾವು, ಪತಿ ಗಂಭೀರ

ಬಂಟ್ವಾಳ: ನವ ದಂಪತಿಗಳಿಬ್ಬರು ಪ್ರಯಾಣಿಸುತ್ತಿದ್ದ ಕಾರು ಭೀಕರ ಅಪಘಾತ ಸಂಭವಿಸಿ ನವವಿವಾಹಿತೆ ಸಾವನ್ನಪ್ಪಿದ್ದು, ಪತಿ ಗಂಭೀರವಾಗಿ ಗಾಯಗೊಂಡ ಘಟನೆ ರಾಷ್ಟ್ರೀಯ …

Leave a Reply

Your email address will not be published. Required fields are marked *

You cannot copy content of this page.