ಉಡುಪಿ: ಪಾರ್ಟ್ ಟೈಮ್ ಜಾಬ್ ಹೆಸರಿನಲ್ಲಿ ಟಾಸ್ಕ್ ನೀಡಿ ಯುವತಿಯೋರ್ವಳಿಗೆ ಲಕ್ಷಾಂತರ ರೂ. ಆನ್‌ಲೈನ್ ಮೂಲಕ ವಂಚಿಸಿರುವ ಬಗ್ಗೆ ಉಡುಪಿ ಸೆನ್ ಅಪರಾಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಿಶ್ಚಿತಾ(25) ಎಂಬವರಿಗೆ ಸಾಮಾಜಿಕ ಜಾಲತಾಣದಲ್ಲಿ ಪಾರ್ಟ್ ಟೈಮ್ ಜಾಬ್ ಬಗ್ಗೆ ಜಾಹೀರಾತು ಬಂದಿದ್ದು ಅದನ್ನು ನಂಬಿ ಲಿಂಕ್‌ನ್ನು ಕ್ಲಿಕ್ ಮಾಡಿ ನೊಂದಣಿ ಮಾಡಿಕೊಂಡಿದ್ದರು. ನಂತರ ಅಪರಿಚಿತ ವ್ಯಕ್ತಿ ಕರೆ ಮಾಡಿ ಕೆಲವೊಂದು ಟಾಸ್ಕ್ ಗಳನ್ನು ನೀಡಿ, ಹೆಚ್ಚು ಹಣ ಪಡೆಯುವ ಬಗ್ಗೆ ನಂಬಿಸಿದ್ದರು. ಅದರಂತೆ ಅವರು ಜು.11ರಿಂದ 14ರವರೆಗೆ ಹಂತ ಹಂತವಾಗಿ ಒಟ್ಟು 2,06,507 ಹಣವನ್ನು ಆನ್‌ಲೈನ್ ಮೂಲಕ ಅಪರಿಚಿತ ವ್ಯಕ್ತಿಗಳು ತಿಳಿಸಿದ ಖಾತೆಗೆ ವರ್ಗಾಯಿಸಿದ್ದರು. ಬಳಿಕ ಅವರು ಹಣವನ್ನು ನೀಡದೆ ಮೋಸ ಮಾಡಿರುವುದಾಗಿ ದೂರಲಾಗಿದೆ.