ಉಡುಪಿ: ಚಲಿಸುತ್ತಿದ್ದಾಗಲೇ ಕಳಚಿದ KSRTC ಬಸ್ಸಿನ ಟಯರ್..!

ಉಡುಪಿ: ಚಲಿಸುತ್ತಿದ್ದಾಗಲೇ ಕೆಎಸ್‌ಆರ್‌ಟಿಸಿ ಬಸ್ಸಿನ ಟಯರ್ ಕಳಚಿದ್ದು, ಸಂಭವನೀಯ ಅನಾಹುತ ತಪ್ಪಿದ ಘಟನೆ ಕುಂದಾಪುರ ಆಜ್ರಿ ಸಮೀಪದ ಹೆಮ್ಮಕ್ಕಿ ಬಳಿ ಶನಿವಾರ ನಡೆದಿದೆ.

ಆಜ್ರಿಯಿಂದ ಕುಂದಾಪುರಕ್ಕೆ ಸಂಚರಿಸುವ ಕೆಎಸ್‌ಆರ್‌ಟಿಸಿ ಬಸ್ ಇದಾಗಿದೆ. ಬಸ್ ನಿಧಾನಗತಿಯಲ್ಲಿ ಸಂಚರಿಸುತ್ತಿದ್ದರಿoದ ಯಾವುದೇ ಅನಾಹುತ ಸಂಭವಿಸದೆ ಪ್ರಯಾಣಿಕರೆಲ್ಲರೂ ಅಪಾಯದಿಂದ ಪಾರಾಗಿದ್ದಾರೆ.

ಈ ಬಗ್ಗೆ ಆಜ್ರಿಯ ನಿವಾಸಿ ಚಂದ್ರಹಾಸ ಅವರು ಪ್ರತಿಕ್ರಿಯೆ ನೀಡಿದ್ದು, ಕೆಎಸ್‌ಆರ್‌ಟಿಸಿ ಹಾಗೂ ಡಿಪೋ ಮೆಕ್ಯಾನಿಕ್‌ಗಳ ನಿರ್ಲಕ್ಷö್ಯದಿಂದ ಈ ಘಟನೆ ಸಂಭವಿಸಿದೆ. ಪ್ರಯಾಣಿಕರ ಜೀವದೊಂದಿಗೆ ಚೆಲ್ಲಾಟ ಆಡುವವರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.

Check Also

ಮಂಗಳೂರು : ಇನ್ನೊಬ್ಬರ ಜೀವ ಉಳಿಸಲು ಹೋಗಿ ತನ್ನ ಪ್ರಾಣವನ್ನೆ ತೆತ್ತ ಅರ್ಚನಾ ಕಾಮತ್…!!

ಮಂಗಳೂರು : ಇನ್ನೊಬ್ಬರ ಜೀವ ಉಳಿಸಲು ಹೋಗಿ ತನ್ನ ಮಹಿಳೆಯೊಬ್ಬರು ತನ್ನ ಪ್ರಾಣವನ್ನೇ ತೆತ್ತ ಹೃದಯವಿದ್ರಾವಕ ಘಟನೆ ನಡೆದಿದೆ. ಮೃತರನ್ನು …

Leave a Reply

Your email address will not be published. Required fields are marked *

You cannot copy content of this page.