
ಬಂಟ್ವಾಳ: ಯುವಕನೋಬ್ಬ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಾಣಿ ಸಮೀಪದ ಬುಡೋಳಿ ಮಡಲ ಎಂಬಲ್ಲಿ ಬುಧವಾರ ನಡೆದಿದೆ.
ಮೃತ ಯುವಕನನ್ನು ಬುಡೋಳಿ ಮಡಲ ನಿವಾಸಿ ಸುಶಾಂತ್ (25) ಎಂದು ಗುರುತಿಸಲಾಗಿದೆ. ಸುಶಾಂತ್ ಮಿನಿ ಬಸ್ ಖರೀದಿಸಿ ಸ್ವಂತ ವಾಹನದಲ್ಲಿ ಚಾಲಕನಾಗಿ ದುಡಿಯುತ್ತಿದ್ದರು. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ವಿಟ್ಲ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ
