ಕಾರ್ಕಳ : ಕಾರ್ಕಳ ಮತ್ತು ಹೆಬ್ರಿ ತಾಲೂಕಿನ ವ್ಯಾಪ್ತಿಯಲ್ಲಿ ಭಾರಿ ಗಾಳಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ತಾಲೂಕಿನ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆ ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ಜು.25ರಂದು ರಜೆ ಸಾರಲಾಗಿದೆ.ಕಾರ್ಕಳ ತಹಶೀಲ್ದಾರ್ ನರಸಪ್ಪ ಅವರು ನಿನ್ನೆ ರಾತ್ರಿ ರಜೆ ಘೋಷಣೆ ಮಾಡಿದ್ದು, ಕ್ಷೇತ್ರ ಶಿಕ್ಷಣಾಧಿಕಾರಿ ಈಗಾಗಲೇ ಇದನ್ನು ಎಲ್ಲ ಮುಖ್ಯಶಿಕ್ಷಕರಿಗೆ ತಿಳಿಸಿದ್ದಾರೆ.ಕೆಲದಿನ ತುಸು ಬಿಡುವು ನೀಡಿದ್ದ ಮಳೆ ನಿನ್ನೆಯಿಂದ ಮತ್ತೆ ಅಬ್ಬರಿಸಲು ತೊಡಗಿದೆ. ಮಳೆಯ ಜೊತೆಗೆ ಭಾರಿ ವೇಗದಲ್ಲಿ ಗಾಳಿಯೂ ಬೀಸುತ್ತಿರುವುದರಿಂದ ಮಕ್ಕಳ ಸುರಕ್ಷೆಯ ದೃಷ್ಟಿಯಿಂದ ಶಾಲೆಗಳಿಗೆ ರಜೆ ನೀಡಲಾಗಿದೆ ಎಂದು ತಹಸೀಲ್ದಾರ್ ತಿಳಿಸಿದ್ದಾರೆ.