ಮೂಡುಬಿದಿರೆ : ಭೀಕರ ಮಳೆಗೆ ಬೋರುಗುಡ್ಡೆಯಲ್ಲಿ ಮನೆ ಕುಸಿತ – ವೃದ್ದೆ ಸಾವು

ಮೂಡುಬಿದಿರೆ: ಭೀಕರ ಮಳೆಗೆ ಮನೆಯೊಂದು ಸಂಪೂರ್ಣವಾಗಿ ಕುಸಿದು ಬಿದ್ದ ಪರಿಣಾಮ ವೃದ್ಧೆಯೊಬ್ಬರು ಸಾವನ್ನಪ್ಪಿದ ಘಟನೆ ತಾಲೂಕಿನ ಬೋರುಗುಡ್ಡೆಯಲ್ಲಿ ನಡೆದಿದೆ.

ಕಳೆದ ರಾತ್ರಿ ಈ ಪ್ರದೇಶದಲ್ಲಿ ಸುರಿದ ರಣಭೀಕರ ಮಳೆಗೆ ಮನೆಯೊಂದು ಕುಸಿದು ಬಿದ್ದಿದೆ. ನೆಲ್ಲಿಕಾರು ಗ್ರಾಮ ಪಂಚಾಯತ್‌ ವ್ಯಾಪ್ತಿಯ ಬೋರುಗುಡ್ಡೆ ಜನತಾ ಕಾಲನಿ ನಿವಾಸಿ ಪರಿಶಿಷ್ಟ ಜಾತಿಯ ಗೋಪಿ (80) ಎಂಬವರು ಮೃತಪಟ್ಟಿದ್ದಾರೆ.

ಮಳೆಯಿಂದಾಗಿ ಗೋಪಿ ಅವರ ಮನೆ ಸೋರುತ್ತಿತ್ತು. ಅದಕ್ಕೆ ಟರ್ಪಾಲು ಹಾಕಲೆಂದು ಮಕ್ಕಳು ಹೊರಗೆ ಬಂದಿದ್ದರು. ಈ ಸಂದರ್ಭ ಮನೆಯು ಸಂಪೂರ್ಣ ಕುಸಿದು ಬಿದ್ದಿದ್ದು, ಮನೆಯೊಳಗಡೆಯಿದ್ದ ಗೋಪಿ ಅವರಿಗೆ ತೀವ್ರ ಗಾಯಗಳಾಗಿದ್ದವು.

ಅವರನ್ನು ಕಾರ್ಕಳ ಆಸ್ಪತ್ರೆಯಲ್ಲಿ ದಾಖಲಿಸಲಾಯಿತಾದರೂ  ಚಿಕಿತ್ಸೆ ಫಲಕಾರಿಯಾಗದೆ ಇಂದು ಬೆಳಿಗ್ಗೆ ಮೃತಪಟ್ಟಿದ್ದಾರೆ.

Check Also

ಕಾಪು: ಎರಡು ಗುಂಪುಗಳ ನಡುವೆ ಹೊಡೆದಾಟ- ಪ್ರಕರಣ ದಾಖಲು

ಕಾಪು: ಮಣಿಪುರ ಗ್ರಾಮದ ರಹಮಾನಿಯ ಜುಮ್ಮಾ ಮಸೀದಿ ಎದುರಿನ ಸಾರ್ವಜನಿಕ ಸ್ಥಳದಲ್ಲಿ ಎರಡು ಯುವಕರ ಗುಂಪು ಸೇರಿಕೊಂಡು ಶಾಂತಿ ಭಂಗ …

Leave a Reply

Your email address will not be published. Required fields are marked *

You cannot copy content of this page.