ಮಣಿಪಾಲ: ಲಾಡ್ಜ್ ನಲ್ಲಿ ವೇಶ್ಯಾವಾಟಿಕೆ ದಂಧೆ : ಪ್ರಕರಣ ದಾಖಲು…!

ಮಣಿಪಾಲ: ಉಡುಪಿ ಜಿಲ್ಲೆಯ ಮಣಿಪಾಲ ಸಮೀಪ 80 ಬಡಗಬೆಟ್ಟು ಗ್ರಾಮದ ಖಾಸಗಿ ಲಾಡ್ಜ್ ಒಂದರಲ್ಲಿ ಅಕ್ರಮ, ಲಾಭಕ್ಕಾಗಿ ಬಲವಂತವಾಗಿ ಮಹಿಳೆಯನ್ನು ಇರಿಸಿ ವೇಶ್ಯಾವಾಟಿಕೆ ನಡೆಸುತ್ತಿದ್ದ ಪ್ರಕರಣಕ್ಕೆ ಸಂಬಂಧಿಸಿ ಆರೋಪಿಗಳ ವಿರುದ್ಧ ಮಣಿಪಾಲ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ದಾಳಿಯ ವೇಳೆ ಆರೋಪಿಗಳು ತಪ್ಪಿಸಿಕೊಂಡಿದ್ದಾರೆ ಎಂದು ಮಾಹಿತಿ ತಿಳಿಯಲಾಗಿದೆ.ರೂಮ್‌ನಲ್ಲಿದ್ದ ಪಶ್ಚಿಮ ಬಂಗಾಲ ಮೂಲದ ಪ್ರಸ್ತುತ ಬೆಂಗಳೂರಿನಲ್ಲಿ ವಾಸವಿರುವ ಸಂತ್ರಸ್ತ ಯುವತಿಯನ್ನು ರಕ್ಷಿಸಲಾಗಿದೆ. ಈಕೆಯಿಂದ ಕೃತ್ಯದ ಬಗ್ಗೆ ಮಾಹಿತಿ ಕಲೆ ಹಾಕಿದ್ದು, ಸಂತ್ರಸ್ತೆ ನೀಡಿರುವ ಮಾಹಿತಿಯಂತೆ ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸಿಕೊಂಡು ಆರೋಪಿಗಳ ಪತ್ತೆಗೆ ಬಲೆ ಬೀಸಲಾಗಿದೆ. ಮಣಿಪಾಲ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Check Also

ಕಾರ್ಕಳ : ಶಾಲೆಯಲ್ಲಿ ಈದ್‌ ಮಿಲಾದ್‌ ಆಚಣೆ- ಪೋಷಕರಿಂದ ಆಕ್ರೋಶ

ಉಡುಪಿ ಕಾರ್ಕಳ ಸಚ್ಚರಿಪೇಟೆಯ ಖಾಸಗಿ ಶಾಲೆಯಲ್ಲಿ ಈದ್‌ ಮಿಲಾದ್‌ ಆಚರಣೆ ಮಾಡಿರುವುದಕ್ಕೆ ಹಿಂದೂ ಮಕ್ಕಳ ಪೋಷಕರಿಂದ ಆಕ್ಷೇಪ ವ್ಯಕ್ತವಾಗಿದೆ. ಸಚ್ಚರಿಷೇಟೆಯ …

Leave a Reply

Your email address will not be published. Required fields are marked *

You cannot copy content of this page.