March 21, 2026
WhatsApp Image 2024-08-11 at 11.02.07 AM
ಕುಂದಾಪುರ: ಪ್ರಯಾಣಿಕರನ್ನು ಇಳಿಸಲು ನಿಂತಿದ್ದ ಖಾಸಗಿ ಬಸ್ಸಿಗೆ ಹಿಂದಿನಿಂದ ಲಾರಿಯೊಂದು ಡಿಕ್ಕಿ ಹೊಡೆದು ವಿದ್ಯಾರ್ಥಿಗಳು ಸಹಿತ ಹಲವರು ಗಾಯಗೊಂಡ ಘಟನೆ ರಾಷ್ಟ್ರೀಯ ಹೆದ್ದಾರಿ 66 ರ ತಲ್ಲೂರು ಪ್ರವಾಸಿ ಹೋಟೆಲ್ ಬಳಿ ನಡೆದಿದೆ.
ಭಟ್ಕಳದಿಂದ ಕುಂದಾಪುರಕ್ಕೆ ಬರುತ್ತಿದ್ದ ಖಾಸಗಿ ಬಸ್ ತಲ್ಲೂರು ಪ್ರವಾಸಿ ಸಮೀಪ ಪ್ರಯಾಣಿಕರನ್ನು ಇಳಿಸಲು ಒಮ್ಮೆಲೆ ನಿಲ್ಲಿಸಿದ ಸಂದರ್ಭ ಬಸ್ಸಿನ ಹಿಂದೆ ಬರುತ್ತಿದ್ದ ಎಲ್ ಪಿ ಲಾರಿಯು ಬಸ್ಸಿನ ಹಿಂಭಾಗಕ್ಕೆ ಡಿಕ್ಕಿ ಹೊಡೆದಿದೆ.
ಈ ಅಪಘಾತದಿಂದಾಗಿ ಬಸ್ಸಿನಲ್ಲಿದ್ದ ಹಲವು ಪ್ರಯಾಣಿಕರು, ವಿದ್ಯಾರ್ಥಿಗಳು ಗಂಭೀರ ಗಾಯಗೊಂಡಿದ್ದಾರೆ. ಗಾಯಗೊಂಡವರನ್ನು ತಕ್ಷಣ ಸ್ಥಳೀಯರು ಕುಂದಾಪುರ ಆಸ್ಪತ್ರೆಗೆ ಸಾಗಿಸಿರುತ್ತಾರೆ. ಕುಂದಾಪುರ ಸಂಚಾರಿ ಠಾಣಾ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

About The Author

Leave a Reply

Your email address will not be published. Required fields are marked *

You cannot copy content of this page.