ಕೋಟ: ಬ್ರಹ್ಮಾವರ ತಾಲೂಕಿನ ಸಾಲಿಗ್ರಾಮ ಕಾರ್ಕಡ ಕಡಿದ ಹೆದ್ದಾರಿ ಅಂಗನವಾಡಿ ಕೇಂದ್ರದ ಸಮೀಪ ಬಾಡಿಗೆ ಮನೆಯಲ್ಲಿ ಬೆಳ್ಳಂಬೆಳಿಗ್ಗೆ ಮಹಿಳೆಯನ್ನು ಕೊಲೆ ಮಾಡಲಾಗಿದೆ. ಪತಿಯೇ ಪತ್ನಿಯನ್ನು ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದ್ದು ಪತಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಮೃತ ಮಹಿಳೆ ಜಯಶ್ರೀ ಎಂದು ಗುರುತಿಸಲಾಗಿದ್ದು ಇವರು ಕೊಪ್ಪಳ ಮೂಲದವರಾಗಿದ್ದಾರೆ. 8 ತಿಂಗಳ ಹಿಂದೆಯಷ್ಟೇ ಮದುವೆಯಾಗಿ ಕಾರ್ಕಡದಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದಾರೆ. ಪತಿ ಸಾಲಿಗ್ರಾಮ ಪಟ್ಟಣ ಪಂಚಾಯತ್ ವ್ಯಾಪ್ತಿಯ ಗುಂಡ್ಮಿ ಗ್ರಾಮದ ಕಿರಣ್ ಉಪಾಧ್ಯ ಎಂದು ತಿಳಿದು ಬಂದಿದೆ. ಶಂಕೆಯ ಮೇರೆಗೆ ಮೃತಳ ಪತಿ ಕಿರಣ್ ಉಪಾಧ್ಯ ಗುಂಡ್ಮಿಯನ್ನು ಕೋಟ ಪೊಲೀಸರು ಬಂಧಿಸಿ ತನಿಖೆ ನಡೆಸುತ್ತಿದ್ದಾರೆ.ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.
Check Also
ಕಾಪು: ಎರಡು ಗುಂಪುಗಳ ನಡುವೆ ಹೊಡೆದಾಟ- ಪ್ರಕರಣ ದಾಖಲು
ಕಾಪು: ಮಣಿಪುರ ಗ್ರಾಮದ ರಹಮಾನಿಯ ಜುಮ್ಮಾ ಮಸೀದಿ ಎದುರಿನ ಸಾರ್ವಜನಿಕ ಸ್ಥಳದಲ್ಲಿ ಎರಡು ಯುವಕರ ಗುಂಪು ಸೇರಿಕೊಂಡು ಶಾಂತಿ ಭಂಗ …