ಕುಡಿದ ಮತ್ತಿನಲ್ಲಿ ಪತ್ನಿಯನ್ನೇ ಕೊಂದ ಪಾಪಿ ಪತಿ : ತಾಯಿ ಬರ್ಬರ ಹತ್ಯೆ ಕಂಡು ಬೆಚ್ಚಿಬಿದ್ದ ಮಗ

ಮಂಗಳೂರು: ನಗರದ ತೆಂಕ ಎಕ್ಕಾರು ಗ್ರಾಮದಲ್ಲಿ ಕಂಠ ಪೂರ್ತಿ ಕುಡಿದ ಮತ್ತಿನಲ್ಲಿ ವ್ಯಕ್ತಿಯೋರ್ವ ಪತ್ನಿಯೊಂದಿಗೆ ಜಗಳವಾಡಿ ಕೊಲೆಗೈದಿರುವ ಘಟನೆ ನಡೆದಿದೆ.

ದುರ್ಗೇಶ್ ಎಂಬಾತ ಕುಡಿದ ಮತ್ತಿನಲ್ಲಿ ತನ್ನ ಹೆಂಡತಿ ಸರಿತಾಳೊಂದಿಗೆ ಜಗಳವಾಡಿದ್ದಾನೆ. ಜಗಳ ತಾರಕಕ್ಕೇರಿ ಮರದ ರೀಪಿನಿಂದ ಹೊಡೆದು ಪತ್ನಿಯನ್ನು ಕೊಲೆ ಮಾಡಿದ್ದಾನೆ. ತಾಯಿಯ ಹತ್ಯೆ ಕಂಡು ಮಗ ರಾಹುಲ್ ಹೆದರಿ ತನ್ನ ಅಜ್ಜಿ ಮನೆಗೆ ಓಡಿ ಹೋಗಿದ್ದಾನೆ.

ಸ್ವತಃ ಆರೋಪಿಯೇ ಇಂದು ಬೆಳಗ್ಗೆ ತನ್ನ ಅಣ್ಣ ಮಧುಗೆ ಕರೆ ಮಾಡಿ ಸರಿತಾ ಮೃತಪಟ್ಟಿರುವುದಾಗಿ ತಿಳಿಸಿದ್ದಾನೆ. ಮಧು ಸ್ಥಳಕ್ಕೆ ಬಂದು ನೋಡಿದಾಗ ದುರ್ಗೇಶನೇ ಸರಿತಾಳನ್ನು ಕೊಲೆ ಮಾಡಿರುವುದು ತಿಳಿದುಬಂದಿದೆ. ಈ ಬಗ್ಗೆ ಬಜಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Check Also

ಬಂಟ್ವಾಳ: ಮದ್ವೆಯಾದ ಎರಡೇ ದಿನಕ್ಕೆ ನವ ವಿವಾಹಿತೆ ಸಾವು, ಪತಿ ಗಂಭೀರ

ಬಂಟ್ವಾಳ: ನವ ದಂಪತಿಗಳಿಬ್ಬರು ಪ್ರಯಾಣಿಸುತ್ತಿದ್ದ ಕಾರು ಭೀಕರ ಅಪಘಾತ ಸಂಭವಿಸಿ ನವವಿವಾಹಿತೆ ಸಾವನ್ನಪ್ಪಿದ್ದು, ಪತಿ ಗಂಭೀರವಾಗಿ ಗಾಯಗೊಂಡ ಘಟನೆ ರಾಷ್ಟ್ರೀಯ …

Leave a Reply

Your email address will not be published. Required fields are marked *

You cannot copy content of this page.