ಮಂಗಳೂರು: ಪಿಎಂ ಇಜಿಪಿ, ಮುದ್ರಾಯೋಜನೆ ಫಲಾನುಭವಿಗಳ ಸಂಖ್ಯೆ ಹೆಚ್ಚಳಕ್ಕೆ ಪ್ರಯತ್ನಿಸಿ – ಸಂಸದ ಬ್ರಿಜೇಶ್ ಚೌಟ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೇಂದ್ರ ಸರ್ಕಾರದ ಪಿಎಂ ಇಜಿಪಿ ಹಾಗೂ ಮುದ್ರಾ ಯೋಜನೆಯಡಿ ಗ್ರಾಮೀಣ ಭಾಗದವರಿಗೆ ವಿಶೇಷವಾಗಿ ಮಹಿಳೆಯರು ಹಾಗೂ ಪರಿಶಿಷ್ಟ ಜಾತಿ ಮತ್ತು ಹಿಂದುಳಿದ ವರ್ಗದ ಹೆಚ್ಚಿನ ಫಲಾನುಭವಿಗಳನ್ನು ತಲುಪಲು ಬ್ಯಾಂಕ್‌ಗಳು ಉತ್ತೇಜನ ನೀಡಬೇಕೆಂದು ಸಂಸದ ಬ್ರಿಜೇಶ್ ಚೌಟ ಹೇಳಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತಿ ಸಭಾಂಗಣದಲ್ಲಿ ನಡೆದ ದಕ್ಷಿಣ ಕನ್ನಡ ಜಿಲ್ಲಾ ಬ್ಯಾಂಕುಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಕೇಂದ್ರ ಸರ್ಕಾರದ ವಿವಿಧ ಯೋಜನೆಗಳಡಿ ದೊರೆಯುವ ಸಾಲ-ಸೌಲಭ್ಯಗಳ ಬಗ್ಗೆ ಅರ್ಹ ಫಲಾನುಭವಿಗಳಿಗೆ ಸೂಕ್ತ ಮಾಹಿತಿ ನೀಡಿ ಅದರ ಅನುಕೂಲ ದೊರಕಿಸಿ ಕೊಡುವುದಕ್ಕೆ ಜಿಲ್ಲೆಯಲ್ಲಿರುವ ಸಂಬಂಧಪಟ್ಟ ಬ್ಯಾಂಕ್ ಅಧಿಕಾರಿಗಳು ಹೆಚ್ಚಿನ ಮುತುವರ್ಜಿ ವಹಿಸಬೇಕು ಎಂದರು. ಅಲ್ಲದೆ ಪಿಎಂ ಇಜಿಪಿ ಯೋಜನೆಗೆ ಫಲಾನುಭವಿಗಳ ಆಯ್ಕೆ ಹಾಗೂ ಆಯ್ಕೆಗೊಂಡ ಫಲಾನುಭವಿಗಳ ಸಹಾಯಧನ ವಿಚಾರವಾಗಿಯೂ ಜಿಲ್ಲಾ ಕೈಗಾರಿಕಾ ಕೇಂದ್ರದ ಅಧಿಕಾರಿಗಳು ಹಾಗೂ ಬ್ಯಾಂಕ್ ಅಧಿಕಾರಿಗಳೊಂದಿಗೆ ಸಂಸದರು ವಿಸ್ತೃತವಾಗಿ ಚರ್ಚಿಸಿದರು. ಕೃಷಿ ಕ್ಷೇತ್ರಕ್ಕೆ ಉತ್ತೇಜನ ನೀಡುವ ನಿಟ್ಟಿನಲ್ಲಿ ರೈತರಿಗೆ ಕೆಸಿಸಿ ಕಿಸಾನ್ ಕ್ರೆಡಿಟ್ ಕಾರ್ಡ್ ಸೌಲಭ್ಯ ಒದಗಿಸುವುದಕ್ಕೆ ಬ್ಯಾಂಕ್ಗಳು ಆದ್ಯತೆ ನೀಡಬೇಕು. ಜತೆಗೆ ಉನ್ನತ ವಿದ್ಯಾಭ್ಯಾಸಕ್ಕೆ ಸಾಲ ನೀಡುವಲ್ಲಿ ಕೂಡ ಬ್ಯಾಂಕ್ಗಳು ಯಾವುದೇ ವಿಳಂಬ ಮಾಡದೆ ವಿದ್ಯಾರ್ಥಿಗಳಿಗೆ ಸಕಾಲದಲ್ಲಿ ಸಾಲ ಮಂಜೂರು ಮಾಡಬೇಕೆಂದು ಬ್ಯಾಂಕ್ ಅಧಿಕಾರಿಗಳಿಗೆ ಸಂಸದ ಬ್ರಿಜೇಶ್ ಚೌಟ ಸೂಚಿಸಿದರು.

Check Also

ಕಾರ್ಕಳ : ಶಾಲೆಯಲ್ಲಿ ಈದ್‌ ಮಿಲಾದ್‌ ಆಚಣೆ- ಪೋಷಕರಿಂದ ಆಕ್ರೋಶ

ಉಡುಪಿ ಕಾರ್ಕಳ ಸಚ್ಚರಿಪೇಟೆಯ ಖಾಸಗಿ ಶಾಲೆಯಲ್ಲಿ ಈದ್‌ ಮಿಲಾದ್‌ ಆಚರಣೆ ಮಾಡಿರುವುದಕ್ಕೆ ಹಿಂದೂ ಮಕ್ಕಳ ಪೋಷಕರಿಂದ ಆಕ್ಷೇಪ ವ್ಯಕ್ತವಾಗಿದೆ. ಸಚ್ಚರಿಷೇಟೆಯ …

Leave a Reply

Your email address will not be published. Required fields are marked *

You cannot copy content of this page.